ADVERTISEMENT

ಉಪ್ಪಿನಂಗಡಿ | ಶಿರಾಡಿ ಘಾಟ್‌ನಲ್ಲಿ ಸರಣಿ ಅಪಘಾತ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 14:06 IST
Last Updated 30 ಜೂನ್ 2024, 14:06 IST
ಉಪ್ಪಿನಂಗಡಿ ಸಮೀಪದ ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಐರಾವತ ಹಾಗೂ ರಾಜಹಂಸ ಬಸ್‌ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ನಡೆಯಿತು
ಉಪ್ಪಿನಂಗಡಿ ಸಮೀಪದ ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಐರಾವತ ಹಾಗೂ ರಾಜಹಂಸ ಬಸ್‌ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ನಡೆಯಿತು   

ನೆಲ್ಯಾಡಿ (ಉಪ್ಪಿನಂಗಡಿ): ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಗುಂಡ್ಯ ಸಮೀಪ ಶಿರಾಡಿ ಘಾಟ್ ರಸ್ತೆಯಲ್ಲಿ ಲಾರಿ, ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಐರಾವತ, ರಾಜಹಂಸ ಬಸ್‌ಗಳ ನಡುವೆ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್‌ ಅನ್ನು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಂದಿಕ್ಕುವಾಗ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರಾಜಹಂಸ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ಲಾರಿ ಹಳ್ಳಕ್ಕೆ ಬಿದ್ದಿದೆ.

ಈ ವೇಳೆ ರಾಜಹಂಸ ಬಸ್ ಹಾಗೂ ಐರಾವತ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಐರಾವತ ಬಸ್ ಚಾಲಕ ಕಿರಣ್ ಮೇಸ್ತ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.