ADVERTISEMENT

ವೇಣೂರು ಬಾಹುಬಲಿ ಮಸ್ತಕಾಭಿಷೇಕ: ₹ 74 ಕೋಟಿ ಮೊತ್ತದ ಪ್ರಸ್ತಾವನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2023, 4:13 IST
Last Updated 26 ಸೆಪ್ಟೆಂಬರ್ 2023, 4:13 IST
Venugopala K.
   Venugopala K.

ಮಂಗಳೂರು: ಮುಂದಿನ ವರ್ಷ ಫೆಬ್ರುವರಿಯಲ್ಲಿ ನಡೆಯಲಿರುವ ವೇಣೂರು ಬಾಹುಬಲಿಯ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ₹ 74.35 ಕೋಟಿ ಮೊತ್ತದ ಯೋಜನೆ ಸಿದ್ಧಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ರಾತ್ರಿ ನಡೆದ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಸಚಿವರ ಮುಂದಿರಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅನಗತ್ಯ ವೆಚ್ಚಗಳನ್ನ ಕೈಬಿಟ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಸದ್ಯದಲ್ಲೇ ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಬಾಹುಬಲಿ ಬೆಟ್ಟ, ಕಟ್ಟಡಗಳು ಮತ್ತು ರಸ್ತೆ ಅಭಿವೃದ್ಧಿ, ಅಗಲೀಕರಣ ಇತ್ಯಾದಿಗಳಿಗಾಗಿ ಯೋಜನೆ ಸಿದ್ಧಪಡಿಸಲಾಗಿದೆ.

ADVERTISEMENT

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ‌ನಾಯಕ್, ಅಳದಂಗಡಿ ಅರಮನೆಯ ಅರಸು ಮತ್ತು ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಪದ್ಮಪ್ರಸಾದ್ ಅಜಿಲ, ಸಮಿತಿಯ ಕಾರ್ಯದರ್ಶಿಗಳಾದ ವಿ.ಪ್ರವೀಣ್ ಕುಮಾರ್, ವಿಕಾಸ್ ಕುಮಾರ್, ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ, ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಪ್ರವೀಣ್ ಚಂದ್ರ, ಮುಖಂಡ ಅಭಯಚಂದ್ರ ಜೈನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.