ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ನಗರ ಪೊಲೀಸರು, ನೋಟಿಸ್ ಜಾರಿಗೊಳಿಸಿದ್ದಾರೆ.
ಇಂತಹ ಸಂದೇಶಗಳನ್ನು ಹರಡುತ್ತಿರುವ ಕೆಲ ಮೊಬೈಲ್ ಸಂಖ್ಯೆಗಳ ಮೇಲೆ ನಿಗಾ ಇಡಲಾಗಿದೆ. ಇದೇ ರೀತಿ ಸಂದೇಶ ಕಳುಹಿಸುವುದನ್ನು ಮುಂದುವರಿಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಹೊರದೇಶದಲ್ಲಿ ಕುಳಿತು ಸಂದೇಶ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ. ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವ ಸಂದೇಶ ಹರಡಿದಲ್ಲಿ ಗ್ರೂಪ್‌ಗಳ ಅಡ್ಮಿನ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾಮರಸ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಯಾರೇ ಇಂತಹ ಕೃತ್ಯ ಮಾಡಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.