ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.
ಇಂದಿನಿಂದಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕೋಟ ಅವರ ಅವಧಿ 2028ರ ಜನವರಿ 5ರ ವರೆಗೆ ಇತ್ತು. ಸಂಸದರಾಗಿ ಆಯ್ಕೆಯಾದ ಕಾರಣ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕ. ನಾಮಪತ್ರ ಪರಿಶೀಲನೆ 4ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು 7ರಂದು ಕೊನೆಯ ದಿನ. ಅ.21ರಂದು ಮತದಾನ ನಡೆಯಲಿದೆ. 24ರಂದು ಮತ ಎಣಿಕೆ ನಡೆಸಲಾಗುತ್ತದೆ.
ಈ ಕ್ಷೇತ್ರವು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. 392 ಸ್ಥಳೀಯ ಸಂಸ್ಥೆಗಳಿದ್ದು, 6033 ಮತದಾರರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.