ADVERTISEMENT

ಬೆಂಗಳೂರಿಗೆ ಎರಡು ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 23:58 IST
Last Updated 29 ಜುಲೈ 2024, 23:58 IST
<div class="paragraphs"><p>ರೈಲು (ಪ್ರಾತಿನಿಧಿಕ ಚಿತ್ರ)</p></div>

ರೈಲು (ಪ್ರಾತಿನಿಧಿಕ ಚಿತ್ರ)

   

ಮಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಜಂಕ್ಷನ್ ಮೂಲಕ ಹಾದು ಹೋಗುವ ಮಡಗಾಂವ್ – ಬೆಂಗಳೂರು (ನಂ.01696) ಏಕಮುಖ ವಿಶೇಷ ರೈಲು ಸೇವೆಯನ್ನು ಜು.30ರಂದು ದಕ್ಷಿಣ ರೈಲ್ವೆ ಒದಗಿಸಿದೆ.

ಮಡಗಾಂವ್ ಜಂಕ್ಷನ್‌ನಿಂದ ಹೊರಡುವ ಸಂಜೆ 4.30ಕ್ಕೆ ಹೊರಡುವ ಈ ರೈಲು ರೈಲು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್, ಮಂಗಳೂರು ಜಂಕ್ಷನ್, ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ತ್ರಿಶೂರ್, ಪಾಲಕ್ಕಾಡ್ ಜಂಕ್ಷನ್, ಕೊಯಂಬತ್ತೂರು ಜಂಕ್ಷನ್, ಕೃಷ್ಣರಾಜಪುರಂ ಮಾರ್ಗವಾಗಿ ಮರುದಿನ ಮಧ್ಯಾಹ್ನ 3.30ಕ್ಕೆ ಬೆಂಗಳೂರು ಕೆಎಸ್‌ಆರ್ ನಿಲ್ದಾಣ ತಲುಪಲಿದೆ.

ADVERTISEMENT

ಅದೇ ರೀತಿ ಕಾರವಾರ– ಯಶವಂತಪುರ ಏಕಮುಖ ವಿಶೇಷ ರೈಲು (ನಂ.01656) ಜು.31ರಂದು ಹೊರಡಲಿದೆ. ಈ ರೈಲು ಕಾರವಾರದಿಂದ 5.30ಕ್ಕೆ ಹೊರಟು, ಕುಮಟಾ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮಂಗಳೂರು ಜಂಕ್ಷನ್, ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ತ್ರಿಶೂರ್, ಪಾಲಕ್ಕಾಡ್ ಜಂಕ್ಷನ್, ಕೊಯಂಬತ್ತೂರು ಜಂಕ್ಷನ್, ಕೃಷ್ಣರಾಜಪುರಂ ಮಾರ್ಗವಾಗಿ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಮರುದಿನ 2.15ಕ್ಕೆ ತಲುಪಲಿದೆ ಎಂದು ದಕ್ಷಿಣ ರೈಲ್ವೆ ಪಾಲಕ್ಕಾಡ್ ವಿಭಾಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.