ಸುಳ್ಯ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಮಂಗಳ ವಾರ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಪ್ರಚಾರ ಸಮಿತಿ ಕಚೇರಿ ಬಳಿಯಿಂದ ತಾಲ್ಲೂಕು ಕಚೇರಿ ತನಕ ಮೆರವಣಿಗೆಯಲ್ಲಿ ಸಾಗಿ ಬಂದರು. ಜಿ.ಕೃಷ್ಣಪ್ಪ ಅವರು ತೆರೆದ ವಾಹನದಲ್ಲಿ ಕಾರ್ಯಕರ್ತರತ್ತ ಕೈಬೀಸಿ ಬಂದರು.
ಜಿ.ಕೃಷ್ಣಪ್ಪ ಸುಳ್ಯದ ಚೆನ್ನಕೇಶವ ದೇವಸ್ಥಾನ, ಮೊಗರ್ಪಣೆ ಮಸೀದಿ, ಬೀರಮಂಗಲ ಸೈಂಟ್ ಬ್ರಜಿಡ್ಸ್ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ‘ಮೂರು ದಶಕಗಳಿಗೂ ಅಧಿಕ ಸಮಯ ದಿಂದ ಕಾಂಗ್ರೆಸ್ ಶಾಸಕರನ್ನು ಕಾಣದ ಸುಳ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಸುಳ್ಯದಲ್ಲಿ ಕಾರ್ಯಕರ್ತರ ಸ್ವಾಭಿ ಮಾನದ ಚುನಾವಣೆ’ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಮೂರ್ತಿ ಹೇಳಿದರು.
ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಯಿಂದ ಜನರು ಬೇಸತ್ತು ಹೋಗಿದ್ದಾರೆ. ಆರ್ಥಿಕ ದುಸ್ಥಿತಿಯಿಂದ ರೈತರ, ಜನ ಸಾಮಾನ್ಯರ ಜೀವನ ತತ್ತರಿಸಿದೆ. ಬಿಜೆಪಿ ಸರ್ಕಾರ ಶ್ರೀಮಂತರ ಪರ ಇದ್ದರೆ, ಕಾಂಗ್ರೆಸ್ ಬಡವರ, ಹಿಂದುಳಿದವರ ಪಕ್ಷವಾಗಿದೆ’ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ್ ಮಾತನಾಡಿ, ‘ಇಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ನಮ್ಮ ಪಕ್ಷದೊಳಗೆ ಇಲ್ಲಿ ಸ್ವಲ್ಪ ಗೊಂದಲ ಇದೆ. ಇದು ನಮ್ಮ ಕುಟುಂಬದ ಸಮಸ್ಯೆ ಅಷ್ಟೆ. ಅದು ಎಲ್ಲಾ ಸರಿ ಆಗಲಿದೆ’ ಎಂದರು.
‘ಈ ಬಾರಿ ಕಾರ್ಯಕರ್ತರ ಶ್ರಮ, ಉತ್ಸವ ಹೆಚ್ಚಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪ್ರಚಾರ ಮಾಡಲಿದ್ದೇವೆ. ಈ ಬಾರಿ ಖಂಡಿತಾ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಲಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು.
ಮಂಗಳೂರು ಶಾಸಕ ಯು.ಟಿ.ಖಾದರ್, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಎನ್.ಜಯಪ್ರಕಾಶ್ ರೈ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಡಾ.ರಘು, ಪಿ.ಪಿ. ವರ್ಗೀಸ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಇದ್ದರು.
ಕೆಪಿಸಿಸಿ ವಕ್ತಾರ ಟಿ.ಎಂ. ಶಹೀದ್ ಸ್ವಾಗತಿಸಿದರು. ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಂಜಿ ವಂದಿಸಿದರು.
ದೂರ ಉಳಿದ ನಂದಕುಮಾರ್ ಬಣ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಎಚ್.ಎಂ.ನಂದಕುಮಾರ್ ಮತ್ತು ಅವರ ಬಣದ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದೆ ದೂರ ಉಳಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.