ಪುತ್ತೂರು: ಪುತ್ತೂರು ನಗರಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷ ಬಾಲಚಂದ್ರ ಅವರ ಉಪಸ್ಥಿತಿಯಲ್ಲಿ ನಡೆದ ನಗರಸಭೆಯ ಪ್ರಥಮ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ನಡೆದಿತ್ತು.
ಮಂಗಳವಾರ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸುಂದರ ಪೂಜಾರಿ ಬಡಾವು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಪೌರಾಯುಕ್ತ ಮಧು ಎಸ್.ಮನೋಹರ್ ಅವರು ಚುನಾವಣಾಧಿಕಾರಿಯಾಗಿದ್ದರು.
ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಸ್ಥಾಯಿ ಸಮಿತಿ ಸದಸ್ಯರಾದ ಗೌರಿ ಬನ್ನೂರು, ಪ್ರೇಮ್ ಕುಮಾರ್, ಮೋಹಿನಿ, ಕೆ.ಸಂತೋಷ್ ಕುಮಾರ್, ದೀಕ್ಷಾ ಪೈ, ಮನೋಹರ್, ಪೂರ್ಣಿಮಾ, ರಮೇಶ್ ರೈ ನೆಲ್ಲಿಕಟ್ಟೆ ಭಾಗವಹಿಸಿದ್ದರು.
ಸುಂದರ ಪೂಜಾರಿ ಅವರನ್ನು ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಕಾರ್ಯದರ್ಶಿ ಆರ್.ಸಿ.ನಾರಾಯಣ, ಮುಖಂಡರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಬೂಡಿಯಾರ್ ರಾಧಾಕೃಷ್ಣ ರೈ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿದ್ಯಾ ಗೌರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.