ADVERTISEMENT

ಮಂಗಳೂರು ಗಲಭೆ: ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 19:52 IST
Last Updated 9 ಸೆಪ್ಟೆಂಬರ್ 2020, 19:52 IST
   

ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಕಳೆದ ಡಿಸೆಂಬರ್‌ನಲ್ಲಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಂಗಳೂರಿನ 21 ಮಂದಿಗೆ ಸುಪ್ರೀಂ ಕೋರ್ಟ್‌ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿಸಿ ಕಳೆದ ಡಿಸೆಂಬರ್‌‌ನಲ್ಲಿಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ನಡೆಸಿದ ಗೋಲಿಬಾರ್‌ಗೆ ಇಬ್ಬರು ಬಲಿಯಾಗಿದ್ದರು.

ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದಪೀಠ, ಹಿಂಸಾತ್ಮಕ ಚಟುವಟಿಕೆ, ಸಭೆಗಳಿಂದ ಷರತ್ತು ವಿಧಿಸಿದೆ. ಅಲ್ಲದೇ, 21 ಆರೋಪಿಗಳು ತಲಾ ₹25 ಸಾವಿರ ಮೊತ್ತದ ಬಾಂಡ್‌ ಸಲ್ಲಿಸುವಂತೆ ಸೂಚಿಸಿದೆ.

ADVERTISEMENT

ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ, ವಿ. ರಾಮಸುಬ್ರಮಣಿಯನ್‌ಅವರೂ ಪೀಠದಲ್ಲಿದ್ದರು. ಮಂಗಳೂರಿನ ಆಶಿಕ್‌ ಅಲಿಯಾಸ್‌ ಮೊಹಮ್ಮದ್‌ ಆಶಿಕ್‌ ಮತ್ತು ಇತರರ ಪರ ಹಿರಿಯ ವಕೀಲಆರ್‌. ಬಸಂತ್‌ ಮತ್ತು ಹ್ಯಾರಿಸ್‌ ಬೀರಾನ್‌ಮತ್ತು ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದ್ದರು. ಕರ್ನಾಟಕ ಹೈಕೋರ್ಟ್ ಇದೇ‌ ಫೆಬ್ರುವರಿ 17ರಂದು ಆರೋಪಿ
ಗಳಿಗೆ ಜಾಮೀನು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್‌ ಮಾರ್ಚ್‌ 6ರಂದು ಈ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.