ಬಂಟ್ವಾಳ: ಇಲ್ಲಿನ ತುಂಬೆ ಸಮೀಪದ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಡಿವೈಡರ್ ಗೆ ಹಾನಿ ಉಂಟಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಉರುಳಿ ಬಿದ್ದು ಬಳಿಕ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್ ಗೆ ಡಿಕ್ಕಿಯಾಗಿದೆ.
ಗ್ಯಾಸ್ ಸೋರಿಕೆಯಾಗದ ಪರಿಣಾಮ ಯಾವುದೇ ಹೆಚ್ಚಿನ ಹಾನಿ ಉಂಟಾಗಿಲ್ಲ.
ಬಂಟ್ವಾಳ ಅಗ್ನಿಶಾಮಕ ದಳ, ಸಂಚಾರಿ ಠಾಣೆ ಪೊಲೀಸರು ಬಂದು ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.