ADVERTISEMENT

ಕ್ಷಯರೋಗ ನಿರ್ಮೂಲನೆ: ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 6:16 IST
Last Updated 12 ಡಿಸೆಂಬರ್ 2023, 6:16 IST
 ಮಂಗಳೂರಿನಲ್ಲಿ ನಡೆದ ಕ್ಷಯರೋಗ ಮುಕ್ತ ಭಾರತ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು  - ಪ್ರಜಾವಾಣಿ ಚಿತ್ರ
 ಮಂಗಳೂರಿನಲ್ಲಿ ನಡೆದ ಕ್ಷಯರೋಗ ಮುಕ್ತ ಭಾರತ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು  - ಪ್ರಜಾವಾಣಿ ಚಿತ್ರ   

ಮಂಗಳೂರು: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳು ಸೋಮವಾರ ನಗರದಲ್ಲಿ ಜಾಗೃತಿ ಜಾಥಾ ನಡೆಸಿದರು.

ಮಂಗಳೂರು ವಿಶ್ವವಿದ್ಯಾಲಯ, ಯುವ ರೆಡ್‍ಕ್ರಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ನಿಯಂತ್ರಣ ಘಟಕ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಭಾರತೀಯ ರೆಡ್‍ಕ್ರಾಸ್ ಸಹಯೋಗದಲ್ಲಿ ನಡೆದ ಜಾಥಾಕ್ಕೆ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸ್ಥಳೀಯ ಘಟಕದ ಅಧ್ಯಕ್ಷ ಶಾಂತರಾಮ್ ಶೆಟ್ಟಿ ಚಾಲನೆ ನೀಡಿದರು.

ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ಕ್ಷಯರೋಗ– ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ಕಾಲೇಜಿ ಪ್ರಭಾರಿ ಪ್ರಾಂಶುಪಾಲೆ ಪ್ರೊ. ಲತಾ ಪಂಡಿತ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಕೆ.ಎಂ.ಸಿ ಸಹಾಯಕ ಪ್ರಾಧ್ಯಾಪಕ ಡಾ. ಜಿತಿನ್ ಸುರೇಂದ್ರನ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಂಯೋಜಕಿ ಪದ್ಮಾ ಅವರು ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು.

ಜಾಗೃತಿ ಜಾಥಾದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ  ಡಾ. ಬದ್ರುದ್ದೀನ್, ಯುವ ರೆಡ್‍ಕ್ರಾಸ್, ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್.,  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.