ADVERTISEMENT

ತಿರುವನಂತಪುರ - ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2024, 15:35 IST
Last Updated 21 ಫೆಬ್ರುವರಿ 2024, 15:35 IST
<div class="paragraphs"><p>'ವಂದೇ ಭಾರತ್'&nbsp;ಎಕ್ಸ್‌ಪ್ರೆಸ್  ರೈಲು</p></div>

'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲು

   

ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.

ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರ ಆರು ದಿನಗಳೂ ಈ ರೈಲು ಸಂಚರಿಸಲಿದೆ.

ADVERTISEMENT

‘ನನ್ನ ಕೋರಿಕೆಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.