ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಘೋಷಣೆ ಕೂಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ.
ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಮೇ 23ರಂದು ರಾತ್ರಿ ನಡೆದ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿಮಿಥುನ್ ರೈ ವಿರುದ್ಧ ಘೋಷಣೆ ಕೂಗಿ, ಜೀವ ಬೆದರಿಕೆ ಹಾಕಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಪ್ರೀತಂ, ಕರ್ಣಮತ್ತು ಮೋಕ್ಷಿತ್ ಬಂಧಿತರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.