ಪುತ್ತೂರು: ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಪೂರಕವಾಗಿ ಮಂಗಳವಾರ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ತಿರಂಗ ಅಭಿಯಾನ ಜಾಥಾ ನಡೆಯಿತು.
ಪುತ್ತೂರಿನ ಬಿಜೆಪಿ ಕಚೇರಿ ಬಳಿಯಿಂದ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜದೊಂದಿಗೆ ತಿರಂಗ ಅಭಿಯಾನ ಆರಂಭಿಸಿದರು.
ಮೊಳಹಳ್ಳಿ ಶಿವರಾಯ ಅವರ ಪ್ರತಿಮೆ ಬಳಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಬಸ್ ನಿಲ್ದಾಣದ ಬಳಿಯ ಗಾಂಧಿಕಟ್ಟೆಗೆ ತೆರಳಿ, ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಲಾಯಿತು. ಕಿಲ್ಲೆ ಮೈದಾನದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ತಿರಂಗ ಅಭಿಯಾನ ಜಾಥಾ ಸಮಾಪನಗೊಂಡಿತು.
ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಪಿ.ಜಿ.ಜಗನ್ನಿವಾಸ ರಾವ್, ಆರ್.ಸಿ.ನಾರಾಯಣ, ಜಯಶ್ರೀ ಎಸ್.ಶೆಟ್ಟಿ, ನಿತೀಶ್ ಕುಮಾರ್ ಶಾಂತಿವನ, ಉಮೇಶ್ ಶೆಣೈ, ಭಾಮಿ ಅಶೋಕ್ ಶೆಣೈ, ವಿದ್ಯಾ ಗೌರಿ, ಗೌರಿ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರು, ಉಮೇಶ್ ಕೋಡಿಬೈಲು, ಉದಯ ಎಚ್., ರಾಧಾಕೃಷ್ಣ ನಂದಿಲ, ಹರೀಶ್ ಬಿಜತ್ರೆ, ಮುರಳಿಕೃಷ್ಣ ಹಸಂತಡ್ಕ ಭಾಗವಹಿಸಿದ್ದರು. ಅಭಿಯಾನ ಸಮಿತಿ ಸಂಚಾಲಕರಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.