ADVERTISEMENT

‘ತುಡರ್’ ತುಳು ಸಿನಿಮಾ ತೆರೆಗೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 12:47 IST
Last Updated 14 ಜೂನ್ 2024, 12:47 IST
‘ತುಡರ್’ ಸಿನಿಮಾ ಬಿಡುಗಡೆ ಕಾರ್ಯಕ್ರಮದಲ್ಲಿ ಗಣೇಶ್ ರಾವ್ ದೀಪ ಬೆಳಗಿದರು
‘ತುಡರ್’ ಸಿನಿಮಾ ಬಿಡುಗಡೆ ಕಾರ್ಯಕ್ರಮದಲ್ಲಿ ಗಣೇಶ್ ರಾವ್ ದೀಪ ಬೆಳಗಿದರು   

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ ‘ತುಡರ್’ ತುಳು ಸಿನಿಮಾ ಶುಕ್ರವಾರ ಬಿಡುಗಡೆಯಾಯಿತು.

ನಗರದ  ಭಾರತ್ ಸಿನೆಮಾಸ್‌ನಲ್ಲಿ ನಡೆದ ಸಮಾರಂಭದಲ್ಲಿ‌ ಮಾತನಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಗಣೇಶ್ ರಾವ್, ‘ತುಡರ್ ಅಂದರೆ ಕನ್ನಡದಲ್ಲಿ ಬೆಳಕು ಅಂತ ಅರ್ಥ. ಒಂದು ಬೆಳಕಿನಿಂದ ಎಷ್ಟೋ ದೀಪಗಳನ್ನು ಬೆಳಗಿಸಬಹುದು. ಅದೇ ರೀತಿ ಬಿಡುಗಡೆಯಾಗಿರುವ ತುಳು ಸಿನಿಮಾ ಚಿತ್ರರಂಗದಲ್ಲಿ ಹೊಸ ಬೆಳಕಾಗಿ ಮೂಡಿಬರಲಿ. ಸಂಸ್ಕೃತಿಗೆ ಪೂರಕವಾದ ಜಾತಿ, ಧರ್ಮ, ದ್ವೇಷವನ್ನು ಪಸರಿಸದೆ ಜನರನ್ನು ಒಂದುಮಾಡುವ ಸಿನಿಮಾಗಳು ಬರಲಿ’ ಎಂದು ಆಶಿಸಿದರು.

ನಟ ಅರವಿಂದ್ ಬೋಳಾರ್ ಮಾತನಾಡಿ, ‘ತುಳು ಸಿನಿಮಾ ಬಿಡುಗಡೆ ಎಂದರೆ ಭಯವಾಗುತ್ತದೆ. ಯಾಕೆಂದರೆ ಸಿನಿಮಾ ಎಷ್ಟು ದಿನ ನಡೆಯುತ್ತದೆ ಎಂದು ಹೇಳಲು ಆಗುವುದಿಲ್ಲ. ಆದರೆ ‘ತುಡರ್’ ಸಿನಿಮಾ ವೀಕ್ಷಿಸಿದವರು ಚಿತ್ರತಂಡವನ್ನು ಮೆಚ್ಚಿ ಬೆನ್ನುತಟ್ಟಿದ್ದಾರೆ. ಹೀಗಾಗಿ ನಮಗೆ ಧೈರ್ಯ ಬಂದಿದೆ. ಈ ಸಿನಿಮಾ ಗೆಲ್ಲಲು ತುಳುವರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬೇಕು’ ಎಂದರು.

ADVERTISEMENT

ಕಲಾವಿದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಸಿನಿಮಾ ಗೆಲ್ಲಲು ತುಳುವರ ಆಶೀರ್ವಾದ ಅಗತ್ಯ ಎಂದರು.


ಭಾರತ್ ಸಿನೆಮಾಸ್‌ನ ಬಾಲಕೃಷ್ಣ ಶೆಟ್ಟಿ, ವಾಲ್ಟರ್ ನಂದಳಿಕೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮನೋಹರ್ ಶೆಟ್ಟಿ, ಉದಯ ಪೂಜಾರಿ ಬಲ್ಲಾಳ್ ಬಾಗ್, ಉಮೇಶ್ ರೈ ಪದವು ಮೇಗಿನ‌ಮನೆ,  ಸ್ವರಾಜ್ ಶೆಟ್ಟಿ, ನಟ ಸಿದ್ದಾರ್ಥ್ ಶೆಟ್ಟಿ, ನಟಿ ದೀಕ್ಷಾ ಭಿಸೆ, ರೂಪಾ ವರ್ಕಾಡಿ, ನಿರ್ದೇಶಕ ತೇಜೇಶ್ ಪೂಜಾರಿ, ಪ್ರಕಾಶ್ ಮಹಾದೇವನ್, ವಿಲ್ಸನ್ ರೆಬೆಲ್ಲೊ, ವಿದ್ಯಾ, ಸಂಪತ್, ಹರೀಶ್ ಶೆಟ್ಟಿ, ವಿಕಾಸ್ ಪುತ್ರನ್, ಮೋಹನ್ ರಾಜ್, ಪ್ರೇಮ್ ಶೆಟ್ಟಿ ಸುರತ್ಕಲ್, ಹಂಚಿಕೆದಾರ ಸಚಿನ್ ಎಸ್. ಉಪ್ಪಿನಂಗಡಿ ಇದ್ದರು. ಚಿರಾಗ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.