ADVERTISEMENT

ತುಳು ಕಲಿಸುವ ಶಾಲೆ ಹೆಚ್ಚಲಿ: ತಾರಾನಾಥ ಕಾಪಿಕಾಡ್

ರಾಮಕುಂಜದಲ್ಲಿ ತುಳು ಭಾಷೆ-ಸಂಸ್ಕೃತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 13:52 IST
Last Updated 14 ಜುಲೈ 2024, 13:52 IST
ಉಪ್ಪಿನಂಗಡಿ ಸಮೀಪದ ರಾಮಕುಂಜದಲ್ಲಿ ತುಳು ಭಾಷೆ-ಸಂಸ್ಕೃತಿ ಕಾರ್ಯಾಗಾರವನ್ನು ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು
ಉಪ್ಪಿನಂಗಡಿ ಸಮೀಪದ ರಾಮಕುಂಜದಲ್ಲಿ ತುಳು ಭಾಷೆ-ಸಂಸ್ಕೃತಿ ಕಾರ್ಯಾಗಾರವನ್ನು ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು   

ಉಪ್ಪಿನಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ರಾಮಕುಂಜದ ನೇತ್ರಾವತಿ ತುಳುಕೂಟ, ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ಕಡಬ ತಾಲ್ಲೂಕಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ‘ತುಳು ಭಾಷೆ-ಸಂಸ್ಕೃತಿ’ ಕಾರ್ಯಾಗಾರ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

‘ತುಳು ಕಲಿಸುವ ಶಾಲೆಗಳ ಸಂಖ್ಯೆ ಹೆಚ್ಚಾಗಬೇಕು. ಈ ಸಂಬಂಧ ಅನುದಾನಿತ ಹಾಗೂ ಸರ್ಕಾರಿ ಶಾಲೆಗಳಲ್ಲಿ ತುಳು ಅತಿಥಿ ಶಿಕ್ಷಕರ ನೇಮಕ ಮಾಡುವ ಬಗ್ಗೆ ಮುಖ್ಯಮಂತ್ರಿಯ ಕಾರ್ಯದರ್ಶಿ, ಪ್ರೌಢ ಶಿಕ್ಷಣ ಸಚಿವ, ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೂರಕ ಭರವಸೆಯೂ ಲಭಿಸಿದೆ ಎಂದರು.

ADVERTISEMENT

ಕಡಬ ತೆಗ್ರ್ ತುಳುಕೂಟದ ಸದಸ್ಯ ಉಮೇಶ್ ಶೆಟ್ಟಿ ಸಾಯಿರಾಂ ಮಾತನಾಡಿ, ತುಳು ಭಾಷೆ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ಪ್ರಾಥಮಿಕ ಶಾಲೆಯ ಹಂತದಲ್ಲಿಯೇ ಮಕ್ಕಳಿಗೆ ತಿಳಿವಳಿಕೆ ನೀಡಬೇಕಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲೇ ಆದೇಶ ಬರಬೇಕು ಎಂದರು.

ರಾಮಕುಂಜ ನೇತ್ರಾವತಿ ತುಳುಕೂಟದ ಅಧ್ಯಕ್ಷ ಕೆ.ಸೇಸಪ್ಪ ರೈ ಮಾತನಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಕಿಶೋರ್, ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಭಾಗವಹಿಸಿದ್ದರು. ಶಿಕ್ಷಕಿ ಸರಿತಾ ಜನಾರ್ದನ ಸ್ವಾಗತಿಸಿ, ಗಾಯತ್ರಿ ವಂದಿಸಿದರು. ಸಂಚಿತಾ ಕಾರ್ಯಕ್ರಮ ನಿರೂಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.