ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಆಯೋಜಿಸಿರುವ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶನಂದನ್ ಎಂ ಶುಕ್ರವಾರ ಉದ್ಘಾಟಿಸಿದರು.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಳಿಗೆಗಳಿಗೆ ಭೇಟಿ ನೀಡಿದರು. ಶ್ರದ್ಧಾ ಅಮಿತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿಒಒ ಅನಿಲ್ ಕುಮಾರ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್. ಸತೀಶ್ಚಂದ್ರ, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಪ್ರಾಂಶುಪಾಲ ಪ್ರಶಾಂತ್ ಶೆಟ್ಟಿ ಇದ್ದರು.
ಭಾರತೀಯ ಜೀವ ವಿಮೆ, ಅಂಚೆ ಇಲಾಖೆ, ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಸೆಲ್ಕೊ ಸೋಲಾರ್, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಪುಸ್ತಕದ ಮಳಿಗೆಗಳು, ರುಡ್‌ಸೆಟ್ ಬಜಾರ್, ಮಿಲೆಟ್ ಸೇರಿದಂತೆ ಇನ್ನೂರಕ್ಕೂ ಹೆಚ್ಚು ಮಳಿಗೆಗಳಿವೆ.
ರಾತ್ರಿ 10.30ರ ವರೆಗೆ ವಸ್ತುಪ್ರದರ್ಶನ ತೆರೆದಿರುತ್ತದೆ. ಉಚಿತ ಪ್ರವೇಶಾವಕಾಶವಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10ರ ವರೆಗೆ ವಸ್ತುಪ್ರದರ್ಶನ ಮಂಟಪದಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಕೆಎಸ್‌ಆರ್‌ಟಿಸಿ ವಿವಿಧ ಕಡೆಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ದೇವಸ್ಥಾನ, ಬೀಡು, ಪ್ರವೇಶ ದ್ವಾರ, ವಸತಿ ಗೃಹಗಳು, ಮಂಜೂಷಾ ವಸ್ತು ಸಂಗ್ರಹಾಲಯ ಹಾಗೂ ವಿವಿಧ ಕಟ್ಟಡಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.