ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಚೆಗೆ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶಾನಿ, ಪ್ರೊ.ಲತಾ ಪಂಡಿತ್ ಹಾಗೂ ಉಡುಪಿಯ ಜಿ.ಶಂಕರ್ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಅಶೋಕ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಭಾರತ ಮತ್ತು ಭಾರತ ಸಂವಿಧಾನ ಪಠ್ಯ ಪುಸ್ತಕ ರಚಿಸಿದ ಉಡುಪಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರಶಾಂತ್ ನೀಲಾವರ ಹಾಗೂ ಕುಂದಾಪುರದ ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಪ್ರೊ.ಪ್ರವೀಣ್.ಕೆ ಅಧ್ಯಕ್ಷತೆ ವಹಿಸಿದ್ದರು.
ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಯರಾಜ್ ಅಮೀನ್, ಮಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಕ್ಸೆವಿಯರ್ ಡಿಸೋಜ, ಭಾರತೀಯ ಸಂವಿಧಾನ ವಿಷಯ ಮೌಲ್ಯಮಾಪನ ಮಂಡಳಿಯ ಅಧ್ಯಕ್ಷ ಸಂತೋಷ್ ಶೆಟ್ಟಿ ಭಾಗವಹಿಸಿದ್ದರು.
ಸಂಘದ ಖಜಾಂಚಿ ವಿದ್ಯಾನಾಥ್ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ಶೆಟ್ಟಿ ವಾರ್ಷಿಕ ವರದಿಯನ್ನು ವಾಚಿಸಿದರು. ಕಾರ್ಕಳ ಎಸ್‌ವಿಟಿ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕಿ ಗೀತಾ ಧನ್ಯವಾದ ಸಮರ್ಪಿಸಿದರು. ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪಾಂಡುರಂಗ ಬೈಂದೂರು ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.