ಮಂಗಳೂರು: ‘ನವರಾತ್ರಿಯ ಸಂದರ್ಭದಲ್ಲಿ ನಗರದಲ್ಲಿ ದಾಂಡಿಯಾ ನೃತ್ಯ ಆಯೋಜನೆಗೆ ಅನುಮತಿ ನೀಡಬಾರದು’ ಎಂದು ವಿಶ್ವ ಹಿಂದೂ ಪರಿಷತ್‌ನ ಮಹಿಳಾ ಘಟಕವಾದ ದುರ್ಗಾವಾಹಿನಿಯು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಗುರುವಾರ ಮನವಿ ಸಲ್ಲಿಸಿದೆ.
‘ನವರಾತ್ರಿಯ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಹಮ್ಮಿಕೊಳ್ಳುವ ದಾಂಡಿಯಾ ನೃತ್ಯದ (ಗರ್ಬ) ಹೆಸರಿನಲ್ಲಿ ನಗರದಲ್ಲೂ ಕೆಲವೊಂದು ಕಡೆ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಯುವಕ–ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಗಳನ್ನು ಹಂಚಿದ್ದಾರೆ. ದಾಂಡಿಯಾ ನೃತ್ಯ ಜಗನ್ಮಾತೆಯ ಹೆಸರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಆದರೆ, ಕಳೆದ ಕೆಲ ವರ್ಷಗಳಲ್ಲಿ ನಗರದಲ್ಲಿ ಆಯೋಜಿಸಿದ್ದ ಇಂತಹ ಕಾರ್ಯಕ್ರಮದಲ್ಲಿ ಡ್ರಗ್ಸ್, ಮಾದಕ ದ್ರವ್ಯ ಸೇವನೆ ಮತ್ತು ಅಸಭ್ಯ ನೃತ್ಯಗಳ ಪ್ರದರ್ಶನದ ಬಗ್ಗೆ ದೂರುಗಳು ಬಂದಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು’ ಎಂದು ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಹಾಗೂ ಜಿಲ್ಲಾ ಸಹ ಸಂಯೋಜಕಿ ತುಳಸಿ ಎಸ್.ಮೆಂಡನ್ ಅವರು ಪೊಲೀಸ್ ಕಮಿಷನರ್‌ಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.