ADVERTISEMENT

ದ. ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರ | ವಿಧಾನ ಪರಿಷತ್ ಉಪ ಚುನಾವಣೆ: ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 5:07 IST
Last Updated 21 ಅಕ್ಟೋಬರ್ 2024, 5:07 IST
<div class="paragraphs"><p>ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ   ಪಾಲಿಕೆಯ ಬಿಜೆಪಿ ಸದಸ್ಯರು ಶಾಸಕ ಡಾ.ವೈ.ಭರತ್ ಶೆಟ್ಟಿ ಜೊತೆ ಬಂದು ಸೋಮವಾರ ಮತದಾನ ಮಾಡಿದರು.</p></div>

ಮಂಗಳೂರು ಮಹಾನಗರ ಪಾಲಿಕೆಯ ಮತಗಟ್ಟೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರು ಶಾಸಕ ಡಾ.ವೈ.ಭರತ್ ಶೆಟ್ಟಿ ಜೊತೆ ಬಂದು ಸೋಮವಾರ ಮತದಾನ ಮಾಡಿದರು.

   

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ 8 ರಿಂದ ಆರಂಭವಾಗಿದೆ.

ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿರುವ ಮತಗಟ್ಟೆಯಲ್ಲಿ ಬೆಳಿಗ್ಗೆ 10 ಗಂಟೆವರೆಗೆ ಒಟ್ಟು 36 ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಈ ಮತಗಟ್ಟೆಯಲ್ಲಿ ಒಟ್ಡು 65 ಮತದಾರರು ಇದ್ದಾರೆ.

ADVERTISEMENT

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕಾಗಿ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಕಿಶೋರ್ ಕುಮಾರ್ ಬೊಟ್ಯಾಡಿ,

ಕಾಂಗ್ರೆಸ್ ನಿಂದ ರಾಜು ಪೂಜಾರಿ, ಎಸ್ ಡಿಪಿಐನ ಅನ್ವರ್ ಸಾದತ್ ಹಾಗೂ ದಿನಕರ್ ಉಳ್ಳಾಲ್ (ಪಕ್ಷೇತರ) ಅಭ್ಯರ್ಥಿಗಳಾಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಜನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ 6032 ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. 392 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ‌. ಸಂಜೆ 4ರವರೆಗೆ ಮತದಾನ ನಡೆಯಲಿದೆ. ನಗರದ ಕೊಡಿಯಾಲ್ ಬೈಲ್ ನ ಸೇಂಟ್ ಅಲೋಷಿಯಸ್ ಪಿ.ಯು. ಕಾಲೇಜಿನಲ್ಲಿ ಇದೇ 24ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.