ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 11 ಮಂದಿ ಕಣದಲ್ಲಿ ಉಳಿದುಕೊಂಡಿದ್ದು, ಪೈಪೋಟಿಯ ಸ್ಪಷ್ಟ ಚಿತ್ರಣ ಹೊರಬಿದ್ದಿದೆ. ಕಾಂಗ್ರೆಸ್‌ನ ಮರಿತಿಬ್ಬೇಗೌಡ ಹಾಗೂ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ನಡುವೆ ನೇರ ಹಣಾಹಣಿ ಕಂಡುಬಂದಿದೆ.
ನಾಮಪತ್ರ ಹಿಂಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಈ.ಸಿ. ನಿಂಗರಾಜ್ ಗೌಡ ತಮ್ಮ ಉಮೇದುವಾರಿಕೆ ವಾಪಸ್ ಪಡೆದರು. ಜೊತೆಗೆ ಪಕ್ಷೇತರ ಅಭ್ಯರ್ಥಿ ರಾಜು ಕೆ.ಆರ್. ಕೂಡ ಹಿಂದೆ ಸರಿದಿದ್ದಾರೆ.
ಕಣದಲ್ಲಿರುವವರು: ಮರಿತಿಬ್ಬೇಗೌಡ (ಕಾಂಗ್ರೆಸ್), ಕೆ.ವಿವೇಕಾನಂದ (ಜೆಡಿಎಸ್), ನಾಗೇಂದ್ರ ಬಾಬು (ಕೆಜೆಪಿ), ವಾಟಾಳ್ ನಾಗರಾಜ್ (ಕನ್ನಡ ಚಳವಳಿ ವಾಟಾಳ್ ಪಕ್ಷ), ಅನಿಲ್ ಕುಮಾರ್, ಅಂಬರೀಷ್, ನಾಗಮಲ್ಲೇಶ್, ನಿಂಗರಾಜು ಎಸ್., ಕೆ.ಸಿ. ಪುಟ್ಟಸಿದ್ದಶೆಟ್ಟಿ, ಆರ್. ಮಹೇಶ್ ಹಾಗೂ ರಾಜು ಕೆ. (ಎಲ್ಲರೂ ಪಕ್ಷೇತರರು).
ಚುನಾವಣಾ ಆಯೋಗದ ಸೂಚನೆಯಂತೆ ಮತದಾರರ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದು. ಈ ಚುನಾವಣೆಯಲ್ಲಿ ಎನ್‌ಒಟಿಎ (ನೋಟಾ) ಇರುವುದಿಲ್ಲ. ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು https://ceo.karnataka.gov.in/TGC_Electionroll2024/ ಜಾಲತಾಣದಲ್ಲಿ ಪಡೆಯಬಹುದು ಎಂದು ಚುನಾವಣಾ ಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.