ADVERTISEMENT

ವಿವೇಕಾನಂದರು ಸ್ವಾಭಿಮಾನದ ಸಂಕೇತ: ಯು. ಟಿ. ಖಾದರ್

ರಾಮಕೃಷ್ಣ ಮಠದಲ್ಲಿ ‘ಮೇಧಾ’ ಶೈಕ್ಷಣಿಕ ವಿಚಾರ ಸಂಕಿರಣ ಮುಕ್ತಾಯ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 14:10 IST
Last Updated 14 ಸೆಪ್ಟೆಂಬರ್ 2024, 14:10 IST
ಮಂಗಳೂರಿನ ರಾಮಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಜನ್ ಬೆಳ್ಳಿಪ್ಪಾಡಿ, ಗಣೇಶ್ ಕಾರ್ಣಿಕ್, ಜಿತಕಾಮಾನಂದಜಿ, ದೀಕ್ಷಿತ್ ರೈ, ಸ್ವಾಮಿ ಆತ್ಮಶ್ರದ್ಧಾನಂದಜಿ ಭಾಗವಹಿಸಿದ್ದರು
ಮಂಗಳೂರಿನ ರಾಮಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಜನ್ ಬೆಳ್ಳಿಪ್ಪಾಡಿ, ಗಣೇಶ್ ಕಾರ್ಣಿಕ್, ಜಿತಕಾಮಾನಂದಜಿ, ದೀಕ್ಷಿತ್ ರೈ, ಸ್ವಾಮಿ ಆತ್ಮಶ್ರದ್ಧಾನಂದಜಿ ಭಾಗವಹಿಸಿದ್ದರು   

ಮಂಗಳೂರು: ಭಾರತದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರು ಸ್ವಾಭಿಮಾನದ ಸಂಕೇತ. ಭವಿಷ್ಯ ಭಾರತದ ಶಕ್ತಿಯಾಗಿರುವ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಹೇಳಿದರು.

ಇಲ್ಲಿನ ರಾಮಕೃಷ್ಣ ಮಿಷನ್‌ನಲ್ಲಿ ನಡೆದ ‘ಮೇಧಾ’ ಪದವಿ ವಿದ್ಯಾರ್ಥಿಗಳ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಯುವಕರು ಬಲಿಷ್ಠರಾದರೆ ಮಾತ್ರ ದೇಶ ಬಲಿಷ್ಠವಾಗಲು ಸಾಧ್ಯ. ಇದರ ಜೊತೆಗೆ ವ್ಯಕ್ತಿತ್ವ ಬೆಳವಣಿಗೆಗೆ ಮೌಲ್ಯಯುತ ಶಿಕ್ಷಣ ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳೋಣ. ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶವನ್ನು ಅರ್ಥೈಸಿಕೊಂಡು ಜೀವನ ರೂಪಿಸೋಣ ಎಂದರು.

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಇದ್ದರು. ಕಾರ್ಯಕ್ರಮ ಉದ್ಘಾಟಿಸಿದ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ದೀಕ್ಷಿತ್ ರೈ ಮಾತನಾಡಿ, ಕಠಿಣ ಪರಿಶ್ರಮ ನಿಮ್ಮ ಬದುಕನ್ನು ಬದಲಾಯಿಸುತ್ತದೆ. ಆದಷ್ಟು ಹೆಚ್ಚು ಜ್ಞಾನಾರ್ಜನೆಯನ್ನು ಮಾಡಿ ಜ್ಞಾನ ನಿಮ್ಮನ್ನು ಒಂದು ದಿನ ಉನ್ನತಿಗೆ ಕರೆದೊಯ್ಯುತ್ತದೆ’ ಎಂದರು.

ADVERTISEMENT

ಸಂಪನ್ಮೂಲ ವ್ಯಕ್ತಿಗಳಿಂದ ಭಾಷಣ ಹಾಗೂ ಸಂವಾದ ನಡೆಯಿತು. ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಶ್ರದ್ಧಾನಂದಜಿ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಹಿರಿಯ ಕಾರ್ಯಕ್ರಮ ನಿರ್ವಾಹಕ ಸಂದೀಪ್ ವಸಿಷ್ಠ ಅಧಿವೇಶನ ನಡೆಸಿಕೊಟ್ಟರು.

ಸಂವಾದದಲ್ಲಿ ಉಡುಪಿಯ ಡಾ. ಎಂ. ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ, ಮಂಗಳೂರಿನ ಚೇರ್ ಸ್ಟುಡಿಯೊದ ರಾಘವೇಂದ್ರ ನೆಲ್ಲಿಕಟ್ಟೆ ಭಾಗವಹಿಸಿದರು. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳಪ್ಪಾಡಿ ವಂದಿಸಿದರು. ಸಂತೋಷ್ ಆಳ್ವ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.