ಪುತ್ತೂರು: ಕನ್ನಡದ ಹಬ್ಬ ಅಥವಾ ಆಚರಣೆಯಿಂದ ಭಾಷೆಯ ಶ್ರೀಮಂತಿಕೆ ಮತ್ತು ಸಂಪ್ರದಾಯವು ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗುತ್ತದೆ ಎಂದು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಹೇಳಿದರು.
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅರಿವು ಮೂಡಿಸುವ ಸಂಬಂಧ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥವನ್ನು ಶುಕ್ರವಾರ ಪುತ್ತೂರಿನಲ್ಲಿ ಸ್ವಾಗತಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಮಾತನಾಡಿ, ಪ್ರತಿ ತಾಲ್ಲೂಕಿಗೆ ಈ ರಥ ಸಂಚರಿಸಲಿದೆ. ಶನಿವಾರ ಬೆಳಿಗ್ಗೆ ಬೆಳ್ತಂಗಡಿ, ಸಂಜೆ ಸುಳ್ಯ, ಬಳಿಕ ಕೊಡಗು ಪ್ರವೇಶಿಸಲಿದೆ ಎಂದರು.
ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಪೌರಾಯುಕ್ತ ಮಧು ಎಸ್.ಮನೋಹರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕೋಶಾಧ್ಯಕ್ಷ ಬಿ.ಐತ್ತಪ್ಪ ನಾಯ್ಕ್, ಸುಬ್ಬಪ್ಪ ಕೈಕಂಬ, ತಿಮ್ಮಪ್ಪ ಪೂಜಾರಿ, ಮಹಮ್ಮದ್ ಬಡಗನ್ನೂರು, ಹರಿಣಾಕ್ಷಿ ಕೇವಳ, ಕೃಷ್ಣಪ್ರಸಾದ್ ಆಳ್ವ, ಎಂ.ಜಿ.ರಫೀಕ್, ರಝಾಕ್ ಬಪ್ಪಳಿಗೆ ಭಾಗವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಸ್ವಾಗತಿಸಿ, ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.