ADVERTISEMENT

ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಆರೋಪ| ರಾಜಕೀಯ ಬಣ್ಣ ಬಳಿಯುವುದು ಏಕೆ: ಗುಂಡೂರಾವ್‌

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 23:30 IST
Last Updated 2 ಮಾರ್ಚ್ 2024, 23:30 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಮಂಗಳೂರು: ‘ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಆರೋಪದ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ಅಧಿಕೃತ ವರದಿ ಬಾರದೇ ಉಹಾಪೋಹ ಚರ್ಚೆ ಸರಿಯಲ್ಲ. ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯುವುದು ಏಕೆ’  ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದರು.

ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಯಾರ ವಿರುದ್ಧ ಆರೋಪ ಇದೆಯೋ, ಅವರ ಬಂಧನವಾಗಿದೆ. ಸಾಕ್ಷ್ಯಗಳ ಆಧಾರದಲ್ಲಿ ಶಿಕ್ಷೆ ವಿಧಿಸುವುದು ನ್ಯಾಯಾಲಯ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ. ಈ ಬಗ್ಗೆ ಬಿಜೆಪಿಯವರು ಹೇಳಿಕೊಡಬೇಕಾಗಿಲ್ಲ’ ಎಂದರು.

ಎಫ್ಎಸ್‌ಎಲ್‌ ವರದಿ ತಿರುಚಲು ಕಾಂಗ್ರೆಸ್‌ ಮುಂದಾಗಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಈ ಹಿಂದೆ ದೇಶದಲ್ಲಿ ಇಂತಹ 20 ಪ್ರಕರಣಗಳು ನಡೆದಿದ್ದು, ಎಲ್ಲದರಲ್ಲೂ ಆ ರೀತಿ ಘೋಷಣೆ ಕೂಗಿಲ್ಲ ಎಂದೇ ವರದಿ ಬಂದಿದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿತ್ತು. ಕೋಮು ವೈಷಮ್ಯ ಬೆಳೆಯಲಿ ಎಂದು ಶ್ರೀರಾಮ ಸೇನೆಯವರು ಈ ಕೃತ್ಯ ನಡೆಸಿದ್ದು ತನಿಖೆಯಲ್ಲಿ ಬಹಿರಂಗವಾಯಿತು. ಮುಸಲ್ಮಾನರ ವಿರುದ್ಧ ಆರೋಪ ಬರುವ ತರಹ ಮಾಡಿ ಅವರೇ ಸಿಕ್ಕಿಬಿದ್ದರು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.