ADVERTISEMENT

ಎಡನೀರು: ಯಕ್ಷಗಾನ ಅಷ್ಟಾಹ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 13:35 IST
Last Updated 30 ಜುಲೈ 2023, 13:35 IST
ಯಕ್ಷ ಅಷ್ಟಾಹ (ಸಂದರ್ಭಿಕ ಚಿತ್ರ)
ಯಕ್ಷ ಅಷ್ಟಾಹ (ಸಂದರ್ಭಿಕ ಚಿತ್ರ)   

ಬದಿಯಡ್ಕ: ‘ಯಕ್ಷಗಾನ ಕಲೆಯ ಮೂಲಕ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಸುಲಭವಾಗಿ ದಾಟಿಸಲು ಸಾಧ್ಯವಿದೆ. ಸುಂದರ ಸಮಾಜದ ನಿರ್ಮಾಣಕ್ಕಾಗಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕು. ಮಕ್ಕಳಿಗೆ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಹೇಳಿದರು.

ಎಡನೀರು ಮಠದಲ್ಲಿ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ತೃತೀಯ ಚಾತುರ್ಮಾಸ್ಯ ಸಾಂಸ್ಕೃತಿಕ ವೇದಿಕೆಯಲ್ಲಿ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದ ನೇತೃತ್ವದಲ್ಲಿ ಆರಂಭವಾದ ತಾಳಮದ್ದಳೆ ಅಷ್ಟಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಟಿ.ಶ್ಯಾಮ ಭಟ್‌ ಇದ್ದರು.

ADVERTISEMENT

ಹಿರಣ್ಯ ವೆಂಕಟೇಶ್ವರ ಭಟ್‌ ಕಾರ್ಯಕ್ರಮ ನಿರೂಪಿಸಿದರು. ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಕವಿ ಶ್ರೀಧರ ಡಿ.ಎಸ್‌.. ವಿರಚಿತ ‘ಭೃಗು ಶಾಪ’ ಯಕ್ಷಕೂಟ ನಡೆಯಿತು. ಯಕ್ಷಗಾನ ತಾಳಮದ್ದಳೆ ಅಷ್ಟಾಹವು ಭಾನುವಾರದಿಂದ 8 ದಿನ ಸಂಜೆ 6ರಿಂದ ಮಠದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.