ಮಂಗಳೂರು: ‘ಕೋವಿಡ್ ನಿಯಂತ್ರಣ ಲಸಿಕೆ ನಮಗೂ ಬೇಕು’ ಎಂಬ ಅಭಿಯಾನವನ್ನು ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಆರಂಭಿಸುವುದಾಗಿ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರು, ಗ್ರಾಮೀಣ ಪ್ರದೇಶದ ಜನತೆ, ಬಡವರಿಗೆ ಲಸಿಕೆ ದೊರೆಯುತ್ತಿಲ್ಲ. ಬಿಜೆಪಿ ಸರ್ಕಾರ ಕೇವಲ ಶ್ರೀಮಂತರಿಗೆ ಮಾತ್ರ ಲಸಿಕೆ ಪೂರೈಸುವ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದರು.
18ರಿಂದ 44ರ ವಯೋಮಾನದ ವರಿಗೆ ಲಸಿಕೆ ನೀಡುವುದನ್ನು ಸರ್ಕಾರ ಸ್ಥಗಿತ ಮಾಡಿದೆ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ದರದಲ್ಲಿ ಲಸಿಕೆ ನೀಡಲಾಗುತ್ತಿದೆ. ಜನ ವಿರೋಧಿ ಲಸಿಕೆ ನೀತಿ ಹೊಂದಿರುವ ಕೇಂದ್ರ ಸರ್ಕಾರದ ವಿರುದ್ಧ ‘ನಮಗೂ ಲಸಿಕೆ ಬೇಕು’ ಅಭಿಯಾನವನ್ನು ಯುವಜನತೆ ನಡೆಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಲಸಿಕೆ ಉತ್ಪಾದಿ ಸುವ ಕಂಪನಿಗಳಿಗೆ ಬೇರೆ ಬೇರೆ ದರ ನಿಗದಿ ಪಡಿಸಲು ಅವಕಾಶ ನೀಡಿರುವುದು ಸರಿಯಲ್ಲ. ಕೇಂದ್ರ ಸರ್ಕಾರಕ್ಕೆ ₹150, ರಾಜ್ಯ ಸರ್ಕಾರ ₹400 ದರಗಳನ್ನು ನಿಗದಿ ಮಾಡಿರು ವುದರಿಂದ ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ. ಬಡವರು, ಕಾರ್ಮಿ ಕರು ಮತ್ತು ಮಧ್ಯಮ ವರ್ಗದವರಿಗೆ ಲಸಿಕೆ ದೊರೆಯದಂತಾಗಿದೆ ಎಂದರು.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್, ನಿರಾಶ್ರಿತರು, ನೊಂದವರಿಗೆ ಸಹಾಯಹಸ್ತ ಚಾಚಿದೆ. ಯುವ ಕಾಂಗ್ರೆಸ್ ಸಹಾಯವಾಣಿಗೆ 1,912 ಕರೆಗಳು ಬಂದಿದ್ದು, ಅವುಗಳಲ್ಲಿ ಶೇ 90 ಕರೆಗಳಿಗೆ ಸ್ಪಂದಿಸಲಾಗಿದೆ. 202 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೆ, 99 ಜನರ ಬಿಡುಗಡೆಗೆ ಸಹಕಾರ, 42 ರೋಗಿಗಳಿಗೆ ಆಮ್ಲಜನಕ, 153 ಮಂದಿಗೆ ಔಷಧ, ಇಬ್ಪರಿಗೆ ಪ್ಲಾಸ್ಮಾ, 130 ಮಂದಿಗೆ ಲಸಿಕೆ, 204 ರೋಗಿಗಳಿಗೆ ಆಂಬುಲೆನ್ಸ್ ನೆರವು, 94 ಯೂನಿಟ್ ರಕ್ತದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾದ್ಯಂತ ಬೀದಿ ಬದಿ ಇರುವ ನಿರಾಶ್ರಿತರು ಸೇರಿದಂತೆ 13,730 ಮಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. 148 ರೋಗಿಗಳಿಗೆ ರಕ್ತದ ವ್ಯವಸ್ಥೆ ಮಾಡಲಾಗಿದ್ದು, ಇವೆಲ್ಲದರ ದಾಖಲೆಗಳು ನಮ್ಮಲ್ಲಿವೆ ಎಂದು ತಿಳಿಸಿದರು.
ಪದಾಧಿಕಾರಿಗಳಾದ ಸರ್ಫರಾಜ್ ನವಾಝ್, ಆಶಿತ್ ಪಿರೇರ, ಶಾಹುಲ್ ಹಮೀದ್, ಚಿತ್ತರಂಜನ್ ಶೆಟ್ಟಿ, ಅನ್ವೀತ್ ಕಟೀಲ್, ನವಾಲ್ ಉಪ್ಪಿನಂಗಡಿ, ಎಂ. ತೌಫೀಕ್, ದೀಕ್ಷಿತ್ ಅತ್ತಾವರ, ರೋಷನ್ ರೈ, ಪ್ರಸಾದ್ ಗಾಣಿಗ, ಹಸನ್ ಡೀಲ್ಸ್, ಮೀನಾ ತೆಲ್ಲಿಸ್, ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.