ADVERTISEMENT

ಮಹಿಳೆಯರಿಗೆ ಶೇ 1ರಷ್ಟು ಸ್ತನ, ಗರ್ಭಕೋಶದ ಕ್ಯಾನ್ಸರ್

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 6:53 IST
Last Updated 7 ಮಾರ್ಚ್ 2024, 6:53 IST
<div class="paragraphs"><p>ದಾವಣಗೆರೆಯ ಬಿಐಎಟಿ ಕಾಲೇಜಿನ ಸಭಾಂಗಣದಲ್ಲಿ ಎಸ್.ಎಸ್ ಕೇರ್ ಟ್ರಸ್ಟ್ ಆಯೋಜಿಸಿದ್ದ ಕ್ಯಾನ್ಸರ್ ಕಾಳಜಿ ಜಾಗೃತಿ ಕಾರ್ಯಕ್ರಮವನ್ನು ಕಿರುವಾಡಿ ಗಿರಿಜಮ್ಮ, ಎಸ್.ಎಸ್ ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಪ್ರಭಾ ಮಲ್ಲಿಕಾರ್ಜುನ್, ಡಾ.ಗಿರಿಜಾ ಬಾಬುಗೌಡ ನಾಡಗೌಡರ್ ದೀಪ ಬೆಳಗಿಸಿ ಉದ್ಘಾಟಿಸಿದರು. </p></div>

ದಾವಣಗೆರೆಯ ಬಿಐಎಟಿ ಕಾಲೇಜಿನ ಸಭಾಂಗಣದಲ್ಲಿ ಎಸ್.ಎಸ್ ಕೇರ್ ಟ್ರಸ್ಟ್ ಆಯೋಜಿಸಿದ್ದ ಕ್ಯಾನ್ಸರ್ ಕಾಳಜಿ ಜಾಗೃತಿ ಕಾರ್ಯಕ್ರಮವನ್ನು ಕಿರುವಾಡಿ ಗಿರಿಜಮ್ಮ, ಎಸ್.ಎಸ್ ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಪ್ರಭಾ ಮಲ್ಲಿಕಾರ್ಜುನ್, ಡಾ.ಗಿರಿಜಾ ಬಾಬುಗೌಡ ನಾಡಗೌಡರ್ ದೀಪ ಬೆಳಗಿಸಿ ಉದ್ಘಾಟಿಸಿದರು.

   

ದಾವಣಗೆರೆ: ಅಂಕಿ ಅಂಶಗಳ ಪ್ರಕಾರ ರಾಜ್ಯದ ಮಹಿಳೆಯರಲ್ಲಿ ಪ್ರತಿ ವರ್ಷ ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್‌ ಶೇ 1ರಷ್ಟು ಹೆಚ್ಚಾಗುತ್ತಿದೆ ಎಂದು ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಎಸ್. ಎಸ್. ಕೇರ್ ಟ್ರಸ್ಟ್‌ ವತಿಯಿಂದ ಬುಧವಾರ ಆಯೋಜಿಸಿದ್ದ ‘ಕ್ಯಾನ್ಸರ್‌ ಕಾಳಜಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

ADVERTISEMENT

‘ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದ ಅವಶ್ಯಕತೆ ಇದ್ದರೆ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು’ ಎಂದು ಹೇಳಿದರು.

ಮಹಿಳೆಯರಿಗೆ ಉಪಯುಕ್ತವಾದ ಹಾಗೂ ಅರಿವು ಮೂಡಿಸುವಂತಹ ಈ ರೀತಿಯ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಎಂದು ಬಿ.ಇ.ಎ. ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ ‌ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ‘ಜಿಲ್ಲೆಯ ಪ್ರತಿ ಹಳ್ಳಿ ಜನರಿಗೂ ಉಚಿತ ಆರೋಗ್ಯ ಕಾರ್ಡ್ ನೀಡಿ, ಸಂಚಾರಿ ಆರೋಗ್ಯ ತಪಾಸಣಾ ಕ್ಲಿನಿಕ್‌ಗಳನ್ನು ಆರಂಭಿಸಿ ಆರೋಗ್ಯದ ಜಾಗೃತಿ ಮೂಡಿಸುವುದು ಹಾಗೂ ದಾವಣಗೆರೆಯನ್ನು ಆರೋಗ್ಯವಂತ ಜಿಲ್ಲೆಯನ್ನು ಮಾಡಬೇಕು ಎಂಬ ನಿಟ್ಟಿನಲ್ಲಿ ಈ ಟ್ರಸ್ಟ್ ಜಾಗೃತಿ ಮೂಡಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.

ಗಿರಿಜಾ ಬಾಬುಗೌಡ ನಾಡಗೌಡರ್, ಜೆ.ಜೆ.ಎಂ. ಕಾಲೇಜಿನ ಪ್ರಾಂಶುಪಾಲರಾದ ಶುಕ್ಲಾ ಶೆಟ್ಟಿ, ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಲಿಂಗನಗೌಡ ಎಸ್. ಪಾಟೀಲ್, ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ  ನಿರ್ದೇಶಕ ಜಗದೀಶ್ ತುಬಾಚಿ, ಲತಾ ಜಿ.ಎಸ್., ಶುಭಾ ಡಿ.ಬಿ., ಹಾಗೂ ಗಾಯತ್ರಿ ಪಾಟೀಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.