ದಾವಣಗೆರೆ: ವೃತ್ತಿಪರ ಕೋರ್ಸ್‍ಗಳ ಸಿಇಟಿ ಪರೀಕ್ಷೆ ನಗರದಲ್ಲಿ ಗುರುವಾರ ಸುಗಮವಾಗಿ ನಡೆಯಿತು. ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇತರೆ ಕೋರ್ಸ್‍ಗಳಿಗೆ ಬೆಳಗಿನ ಅವಧಿಯಲ್ಲಿ ಜೀವವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು. ಮಧ್ಯಾಹ‌್ನ ಗಣಿತದ ಪರೀಕ್ಷೆ ನಡೆಯಿತು.
ಜೀವವಿಜ್ಞಾನ ವಿಷಯಕ್ಕೆ 1281 ವಿದ್ಯಾರ್ಥಿಗಳು ಹಾಗೂ ಗಣಿತಕ್ಕೆ 257 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜೀವವಿಜ್ಞಾನಕ್ಕೆ 12,296 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 11,015 ವಿದ್ಯಾರ್ಥಿಗಳು ಹಾಜರಾದರು. ಗಣಿತಕ್ಕೆ 12,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 12,043 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.