ದಾವಣಗೆರೆ: ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಚನ್ನಗಿರಿ ತಾಲ್ಲೂಕಿನ ಚಿಕ್ಕಕುರುಬರಹಳ್ಳಿ ಗ್ರಾಮದ ರೂಪಾ (8) ಮೃತಪಟ್ಟ ಬಾಲಕಿ.
ಡಿಕ್ಕಿಯಾದ ನಂತರ, ಬಾಲಕಿಯನ್ನು ಅದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಚಾಲಕ, ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.
ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ರಸ್ತೆಯಲ್ಲಿ ಹಂಪ್ಸ್ ಅಳವಡಿಸುವಂತೆ ಆಗ್ರಹಿಸಿದ್ದಾರೆ.
ಕಾರನ್ನು ವಶಕ್ಕೆ ಪಡೆದಿರುವ ಸಂತೇಬೆನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.