ADVERTISEMENT

ಅಂಬೇಡ್ಕರ್ ಜಯಂತಿ: ಶಾಲೆಗಳಿಗೆ ಪೀಠೋಪಕರಣ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 14:23 IST
Last Updated 26 ಫೆಬ್ರುವರಿ 2024, 14:23 IST
ಹೊನ್ನಾಳಿ ತಾಲ್ಲೂಕಿನ ಬಳ್ಳೇಶ್ವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜ ಸ್ಥಂಭ ನಿರ್ಮಾಣಕ್ಕೆ ಎನ್. ಪ್ರಕಾಶ್ ಸೋಮವಾರ ಭೂಮಿ‌ಪೂಜೆ ನೆರವೇರಿಸಿದರು
ಹೊನ್ನಾಳಿ ತಾಲ್ಲೂಕಿನ ಬಳ್ಳೇಶ್ವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜ ಸ್ಥಂಭ ನಿರ್ಮಾಣಕ್ಕೆ ಎನ್. ಪ್ರಕಾಶ್ ಸೋಮವಾರ ಭೂಮಿ‌ಪೂಜೆ ನೆರವೇರಿಸಿದರು   

ಹೊನ್ನಾಳಿ: ‘ಅಂಬೇಡ್ಕರ್ ಅವರ 132ನೇ ಜಯಂತಿ ಅಂಗವಾಗಿ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಧ್ವಜ ಸ್ಥಂಭ, ಅಂಬೇಡ್ಕರ್ ಗ್ರಂಥಾಲಯ, ಪೀಠೋಪಕರಣಗಳನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಅಧ್ಯಕ್ಷ ಎನ್. ಪ್ರಕಾಶ್ ಶಿವಮೊಗ್ಗ ಹೇಳಿದರು.

ತಾಲ್ಲೂಕಿನ ಬಳ್ಳೇಶ್ವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ₹ 3.50 ಲಕ್ಷ ವೆಚ್ಚದಲ್ಲಿ ರಾಷ್ಟ್ರಧ್ವಜ ಸ್ಥಂಭ ನಿರ್ಮಿಸುವ ‌ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಧ್ವಜಸ್ಥಂಭದ ಎದುರು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆ ಕೆತ್ತಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಸೊರಬ, ಶಿವಮೊಗ್ಗ ನಗರ ಹಾಗೂ ಶಿವಮೊಗ್ಗ ಗ್ರಾಮಾಂತರ, ಹಾವೇರಿ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೈಟೆಕ್ ಧ್ವಜಸ್ಥಂಭ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪ್ರವಾಸ, ಆರೋಗ್ಯ ತಪಾಸಣೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ADVERTISEMENT
2ಇಪಿ : ಹೊನ್ನಾಳಿ ತಾ ಬಳ್ಳೇಶ್ವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ $ 3.50 ಲಕ್ಷ ವೆಚ್ಚದಲ್ಲಿ ಹೈಟೆಕ್ ರಾಷ್ಟ್ರಧ್ವಜಸ್ಥಂಭ ನಿರ್ಮಾಣಕ್ಕೆ ಎನ್. ಪ್ರಕಾಶ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. 

ಸಮಿತಿಯ ರಾಜ್ಯ ಕಾರ್ಯದರ್ಶಿ ಚನ್ನೇಶ್, ತಾಲ್ಲೂಕು ಘಟಕದ ಅಧ್ಯಕ್ಷ ತಮ್ಮಣ್ಣ ದಿಡಗೂರು, ಮುಖಂಡರಾದ ಎ.ಕೆ. ನರಸಿಂಹಪ್ಪ, ಬಿ.ಆರ್. ಷಣ್ಮುಖಪ್ಪ ಬಳ್ಳೇಶ್ವರ, ಹರೀಶ್, ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಮಂಜುನಾಥ್, ಸದಸ್ಯ ಸುಭಾಶ್, ಎಸ್‍ಡಿಎಂಸಿ ಅಧ್ಯಕ್ಷ ಬಾಬು, ಮುಖ್ಯಶಿಕ್ಷಕ ಬಿ.ಎನ್. ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.