ADVERTISEMENT

ದಾವಣಗೆರೆ: ಶ್ರದ್ಧಾ-ಭಕ್ತಿಯ ಬಕ್ರೀದ್ ಆಚರಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 4:39 IST
Last Updated 17 ಜೂನ್ 2024, 4:39 IST
<div class="paragraphs"><p> ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.</p></div>

ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.

   

ದಾವಣಗೆರೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.

ನಗರದ ಮದೀನ ಮಸೀದಿ ಸಮೀಪದ ಪಿಬಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಕಲ ಜೀವರಾಶಿಗೆ ಒಳಿತಾಗುವಂತೆ ದೇವರಿಗೆ ಮೊರೆಯಿಟ್ಟರು.

ADVERTISEMENT

ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಪಿಬಿ ರಸ್ತೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆ. ಮೌಲ್ವಿ, ಧರ್ಮ ಗುರುಗಳ ಉಪದೇಶ ಆಲಿಸಿ ಹಬ್ಬ ಆಚರಿಸಿದರು.

ಪ್ರಾರ್ಥನೆ ಬಳಿಕ ಓರೆಗೆಯವರನ್ನು ಆಲಿಂಗಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ಅಂಗವಾಗಿ ಪಿಬಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.