ADVERTISEMENT

ಶಾಸಕ ಯತ್ನಾಳ ಉಚ್ಚಾಟನೆಗೆ ಬಿಜೆಪಿ ಮುಖಂಡರ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 0:32 IST
Last Updated 2 ಅಕ್ಟೋಬರ್ 2024, 0:32 IST
<div class="paragraphs"><p> ಶಾಸಕ ಯತ್ನಾಳ</p></div>

ಶಾಸಕ ಯತ್ನಾಳ

   

ದಾವಣಗೆರೆ: ‘ರಾಜ್ಯ ಸರ್ಕಾರದ ಪತನಕ್ಕೆ ₹ 1,000 ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ’ ಎಂಬ ಗಂಭೀರ ಆರೋಪ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಬಿಜೆಪಿಯ ಬಿಜೆಪಿ ಜಿಲ್ಲಾ ಘಟಕದ ಕೆಲವು ಮುಖಂಡರು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ಕುರಿತ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದ ಪ್ರಮುಖರ ಸಭೆಯನ್ನು ಮತ್ತೊಮ್ಮೆ ಬೆಂಗಳೂರಿನಲ್ಲಿ ನಡೆಸಿ ವರಿಷ್ಠರಿಗೆ ಈ ಕುರಿತ ದೂರು ನೀಡಲು ಮುಂದಾಗಿದ್ದಾರೆ. ಪಕ್ಷಕ್ಕೆ ಮುಜುಗರವುಂಟು ಮಾಡುತ್ತಿರುವವರಿಗೆ ಕಡಿವಾಣ ಹಾಕುವಂತೆ ಆಗ್ರಹಿಸಲು ತೀರ್ಮಾನಿಸಿದ್ದಾರೆ.

ADVERTISEMENT

‘ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟದ ದಿಕ್ಕು ತಪ್ಪಿಸಲು ಯತ್ನಾಳ ಪ್ರಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಪರವಾಗಿ ವಕಾಲತ್ತು ವಹಿಸಿ ಕಾಂಗ್ರೆಸ್ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಈ ನಡವಳಿಕೆಯನ್ನು ತಿದ್ದಿಕೊಂಡು ಬೇಷರತ್‌ ಕ್ಷಮೆ ಕೋರುವಂತೆ ಸೂಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಪಕ್ಷವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ, ವಿಧಾನಪರಿಷತ್‌ನ ಮಾಜಿ ಸದಸ್ಯ ಶಿವಯೋಗಿಸ್ವಾಮಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.