ADVERTISEMENT

ಬಿಜೆಪಿಯತ್ತ ಜನರ ಒಲವು: ಗಾಯತ್ರಿ ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 14:20 IST
Last Updated 26 ಅಕ್ಟೋಬರ್ 2024, 14:20 IST
<div class="paragraphs"><p>ಚನ್ನಗಿರಿ ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು</p></div>

ಚನ್ನಗಿರಿ ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು

   

ಬಿಲ್ಲಹಳ್ಳಿ (ಚನ್ನಗಿರಿ): ‘ಕಾಂಗ್ರೆಸ್ ಸರ್ಕಾರದ ಆಡಳಿಯ ವೈಖರಿ ಕಂಡು ಜನರು ಬೇಸತ್ತು ಹೋಗಿದ್ದಾರೆ. ಎಲ್ಲೆಡೆ ಜನರು ಸ್ವಯಂಪ್ರೇರಿತರಾಗಿ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ ಹೇಳಿದರು.

ತಾಲ್ಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದರು.

ADVERTISEMENT

ತಾಲ್ಲೂಕಿನಲ್ಲಿ ಇದುವರೆಗೂ ಒಂದೇ ಒಂದು ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿಲ್ಲ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಚುನಾವಣೆ ಮಾಡುವುದರಲ್ಲಿ ಮಗ್ನವಾಗಿದೆ. ಜನರ ಸಂಕಷ್ಟ ಪರಿಹರಿಸುತ್ತಿಲ್ಲ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಬಿಜೆಪಿ ಸದಸ್ಯತ್ವ ನೋಂದಣಿ ಭರದಿಂದ ನಡೆಯುತ್ತಿದೆ. ತಾಲ್ಲೂಕಿನಲ್ಲಿ 1 ಲಕ್ಷಕ್ಕಿಂತಲೂ ಹೆಚ್ಚು ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ 70 ಸಾವಿರಕ್ಕಿಂತ ಹೆಚ್ಚು ಸದಸ್ಯತ್ವ ಪಡೆದಿದ್ದಾರೆ ಎಂದರು.

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್ ನಾಯ್ಕ, ಕಾರ್ಯದರ್ಶಿ ಚಂದ್ರಶೇಖರ್ ಗೌಡ, ಉಪಾಧ್ಯಕ್ಷರಾದ ಶಶಿಕುಮಾರ್, ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ.ಎನ್. ಪುಷ್ಪಾವತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.