ದಾವಣಗೆರೆ: ನಗರದ ನಿಟುವಳ್ಳಿಯ 60 ಅಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಎಂಜಿನ್ನಲ್ಲಿ ತಾಂತ್ರಿಕ ದೋಷದಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಇಲ್ಲಿನ ಸರಸ್ವತಿ ನಗರದಿಂದ ಹೊಂಡಾ ಸರ್ಕಲ್ಗೆ ಹೋಗುತ್ತಿದ್ದ ಪ್ರಯಾಣಿಕರಿದ್ದ ನಗರ ಸಾರಿಗೆ ಬಸ್ ಎಂಜಿನ್ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಹಾಗೂ ಬಸ್ ಸಿಬ್ಬಂದಿಯು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.
ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಚಾಲಕ ಹಾಗೂ ನಿರ್ವಾಹಕರು ನೀರು ಹಾಕಿ ಬೆಂಕಿ ನಂದಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.