ಚನ್ನಗಿರಿ: ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಈ ಬಗ್ಗೆ ಚರ್ಚಿಸಲು ನ. 12ರಂದು ಪಟ್ಟಣದ ಕೋರ್ಟ್ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ವಕೀಲರ ಸಂಘದ ಅಧ್ಯಕ್ಷ, ವಲಯ ಅರಣ್ಯಾಧಿಕಾರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕ, ಕಾರ್ಮಿಕ, ಅಬಕಾರಿ ಇಲಾಖೆ, ಡಿವೈಎಸ್‌ಪಿ, ಚನ್ನಗಿರಿ, ಬಸವಾಪಟ್ಟಣ ಹಾಗೂ ಸಂತೇಬೆನ್ನೂರು ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಸಿದ್ಧಲಿಂಗಯ್ಯ ಗಂಗಾಧರ ಮಠ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.