ADVERTISEMENT

ಚನ್ನಗಿರಿ: ಸುಲಿಗೆ, ಕಳವು ಪ್ರಕರಣಗಳ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:19 IST
Last Updated 11 ಜುಲೈ 2024, 14:19 IST
ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಹಾಗೂ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ್ದ ಅಡಿಕೆ ಮತ್ತು ಸುಲಿಗೆ ಹಣವನ್ನು ವಶಪಡಿಸಿಕೊಂಡಿರುವ ಪೊಲೀಸ್ ಸಿಬ್ಬಂದಿ ಜೊತೆಗೆ ಡಿವೈಎಸ್ಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ
ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಹಾಗೂ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ್ದ ಅಡಿಕೆ ಮತ್ತು ಸುಲಿಗೆ ಹಣವನ್ನು ವಶಪಡಿಸಿಕೊಂಡಿರುವ ಪೊಲೀಸ್ ಸಿಬ್ಬಂದಿ ಜೊತೆಗೆ ಡಿವೈಎಸ್ಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ    

ಚನ್ನಗಿರಿ: ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಜುಲೈ 6ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಜುಲೈ 6ರಂದು ತಡರಾತ್ರಿ ದೇವರಹಳ್ಳಿ ಗ್ರಾಮದ ಗೊರಪ್ಪ ಅವರ ಮನೆಯ ಬೀಗ ಮುರಿದು ಒಳಗೆ ನುಗ್ಗಿದ್ದ ಮೂವರು ಕಳ್ಳರು ₹ 2 ಲಕ್ಷ ನಗದು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಲು ಚನ್ನಗಿರಿ ಉಪ ವಿಭಾಗದ ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ, ಚನ್ನಗಿರಿ ಠಾಣೆಯ ಪ್ರಭಾರ ಪಿಐ ಲಿಂಗನಗೌಡ ನೆಗಳೂರು, ಪಿಎಸ್ಐ ಸೈಫುದ್ದೀನ್, ಎಎಸ್ಐ ಶಶಿಧರ್ ಹಾಗೂ ಸಿಬ್ಬಂದಿ ಬೀರೇಶ್ ಪುಟ್ಟಕ್ಕನವರ್, ನರೇಂದ್ರ ಸ್ವಾಮಿ, ಶ್ರೀನಿವಾಸ ಮೂರ್ತಿ, ರೇವಣಸಿದ್ದಪ್ಪ, ಜಿ. ರಮೇಶ್, ಚನ್ನಕೇಶವ ಹಾಗೂ ಚಾಲಕ ರೇವಣಸಿದ್ದಪ್ಪ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.

ADVERTISEMENT

ತಂಡವು, ತಾಲ್ಲೂಕಿನ ಹೊಸೂರು ಗ್ರಾಮದ ಮೊಹಮ್ಮದ್ ಶಫಿವುಲ್ಲಾ, ಶೇಕ್ ಮುಕ್ತಿಯಾರ್ ಅಲಿ ಹಾಗೂ ಕಾನೂನು ಸಂಘರ್ಷಕ್ಕೆ ಒಳಪಟ್ಟಿದ್ದ ಬಾಲಕನನ್ನು ಬಂಧಿಸಿದೆ. ಮೂವರೂ ಆರೋಪಿಗಳು ತಾಲ್ಲೂಕಿನ ಮುದ್ದೇನಹಳ್ಳಿ ಹಾಗೂ ಪಾಂಡೋಮಟ್ಟಿ ಗ್ರಾಮಗಳಲ್ಲಿ ನಾಲ್ಕೂವರೆ ಕ್ವಿಂಟಲ್ ಅಡಿಕೆ ಕಳ್ಳತನ ಮಾಡಿತ್ತು. ಕೃತ್ಯಕ್ಕೆ ಬಳಸಿದ್ದ ಓಮಿನಿ ಸೇರಿ ಒಟ್ಟು ₹ 4.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಎಸ್‌ಪಿ ಉಮಾ ಪ್ರಶಾಂತ್ ಅವರು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸೂಕ್ತ ಬಹುಮಾನ ನೀಡುವುದಾಗಿಯೂ ಘೋಷಿಸಿದ್ದಾರೆ ಎಂದು ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.