ADVERTISEMENT

ಮುಖ್ಯಮಂತ್ರಿ ಭೇಟಿ: ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 14:52 IST
Last Updated 31 ಜನವರಿ 2024, 14:52 IST
ಹೊನ್ನಾಳಿಯ ಕನಕದಾಸರ ಪ್ರತಿಮೆ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಬುಧವಾರ ಪರಿಶೀಲನೆ ನಡೆಸಿದರು 
ಹೊನ್ನಾಳಿಯ ಕನಕದಾಸರ ಪ್ರತಿಮೆ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಬುಧವಾರ ಪರಿಶೀಲನೆ ನಡೆಸಿದರು    

ಹೊನ್ನಾಳಿ: ಫೆಬ್ರುವರಿ 3ರಂದು ಪಟ್ಟಣದಲ್ಲಿ ನಡೆಯುವ ಕನಕದಾಸರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು ಬುಧವಾರ ಸ್ಥಳ ಪರಿಶೀಲನೆ ನಡೆಸಿದರು.

ವೇದಿಕೆ ಹಾಗೂ ಹೆಲಿಪ್ಯಾಡ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಗತ್ಯ ಕ್ರಮಗಳ ಕುರಿತು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಮತ್ತು ಸ್ಥಳೀಯ ಕುರುಬ ಸಮಾಜದ ಮುಖಂಡರಿಗೆ ಸೂಚನೆ ನೀಡಿದರು.

ADVERTISEMENT

‘ಕಾರ್ಯಕ್ರಮದ ಸ್ವರೂಪ ಹೇಗಿರಬೇಕೆಂದು ಈಗಾಗಲೇ ಸಂಘಟಕರಿಗೆ ತಿಳಿಸಿದ್ದೇವೆ’ ಎಂದರು.

‘ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕಾರ್ಯಕ್ರಮ ನಡೆಯುವ ಸ್ಥಳದ ಬಳಿ ತಪಾಸಣೆ ನಡೆಸಲಾಗಿದೆ ಎಂದು ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಹೇಳಿದರು.

ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ತಹಶೀಲ್ದಾರ್ ಪಟ್ಟರಾಜಗೌಡ, ಪೊಲೀಸ್ ಇನ್‌ಸ್ಪೆಕ್ಟರ್ ಸುನಿಲ್‍ಕುಮಾರ್, ಮುಖ್ಯಾಧಿಕಾರಿ ಎಚ್. ನಿರಂಜನಿ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ಮುಖಂಡರಾದ ಬಿ.ಸಿದ್ದಪ್ಪ, ಎಚ್.ಎ. ಉಮಾಪತಿ, ಎಚ್.ಬಿ. ಶಿವಯೋಗಿ, ದಿಡಗೂರು ಫಾಲಾಕ್ಷಪ್ಪ, ಮರುಳಸಿದ್ದಪ್ಪ, ಶ್ರೀನಿವಾಸ್, ಬಾಬು ಹೋಬಳದಾರ್, ಎಚ್.ಎ. ರಂಜಿತ್, ಎಂ. ಸುರೇಶ ಹಾಜರಿದ್ದರು.

3ಇಪಿ : ಹೊನ್ನಾಳಿಯಲ್ಲಿ ಕನಕದಾಸರ ಪ್ರತಿಮೆಯನ್ನು ಮುಖ್ಯಮಂತ್ರಿಗಳು ಅನಾವರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂವಿ.ವೆಂಕಟೇಶ್ ಅವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.