ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1,6,5 ಮತ್ತು 45ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮತಯಾಚಿಸಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ ‘ಈ ಭಾಗದ ಪೌರಕಾರ್ಮಿಕರು ಮತ್ತು ಬಡವರಿಗೆ ಸೂರು ಕಲ್ಪಿಸಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಯಾರು ಮರೆಯಬಾರದು. ಸೂರು ಕಲ್ಪಿಸುವುದರ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ರಾಜ್ಯ ಸರ್ಕಾರ ನೀಡುವ ಯೋಜನೆಗಳನ್ನು ಯಾವುದೇ ಏಜೆಂಟರು ಇಲ್ಲದೇ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ‘ಸಂವಿಧಾನ ರಕ್ಷಣೆ ಮತ್ತು ಎಲ್ಲಾ ವರ್ಗಗಳ ಹಿತ ಕಾಪಾಡುವುದು ನನ್ನ ಧ್ಯೇಯ. ಈ ಭಾಗದಲ್ಲಿ ನಮ್ಮ ಮಾವನವರು ಅಭಿವೃದ್ಧಿ ಮಾಡಿದ್ದು, ಅವರಿಗೆ ಸದಾ ಬೆಂಬಲಿಸುತ್ತಿರುವ ತಾವುಗಳು ನನ್ನನ್ನು ಬೆಂಬಲಿಸಬೇಕು’ ಎಂದು ಮಾಡಿದರು.
ಕಾಂಗ್ರೆಸ್ ವಕ್ತಾರರಾದ ಯು.ಟಿ.ಫರ್ಜಾನ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಸದಸ್ಯರಾದ ಜಿ.ಡಿ.ಪ್ರಕಾಶ್, ಎಲ್.ಡಿ. ಗೋಣೆಪ್ಪ, ಸುಧಾ ಇಟ್ಟಿಗುಡಿ ಮಂಜುನಾಥ್, ಉದಯಕುಮಾರ್, ಎನ್. ನೀಲಗಿರಿಯಪ್ಪ, ಟಿ. ರಮೇಶ್, ಬಿ.ಎಂ. ರಾಮಸ್ವಾಮಿ, ಯುವ ಕಾಂಗ್ರೆಸ್‍ನ ಸಾಗರ್, ಮಾಜಿ ಮೇಯರ್ ಎಚ್.ಬಿ. ಗೋಣೆಪ್ಪ, ಸಾಲುಮನಿ ಬಸವರಾಜ್, ಎಂ.ಮಂಜುನಾಥ್, ಜಮ್ನಳ್ಳಿ ನಾಗರಾಜ್, ಡಿ.ಎಸ್.ಸುರೇಶ್, ಇಟ್ಟಿಗುಡಿ ಮಂಜುನಾಥ್, ಆರ್.ವಾಸುದೇವ್, ವಿಜಯಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.