ADVERTISEMENT

ಸಂವಿಧಾನ ಜಾಥಾ ಯಶಸ್ವಿ: ದಾವಣಗೆರೆ ಜಿಲ್ಲೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 15:56 IST
Last Updated 24 ಫೆಬ್ರುವರಿ 2024, 15:56 IST
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಶಸ್ತಿ ಸ್ವೀಕರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಕೆ.ನಾಗರಾಜ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡಿದ್ದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಶಸ್ತಿ ಸ್ವೀಕರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಕೆ.ನಾಗರಾಜ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡಿದ್ದರು.   

ದಾವಣಗೆರೆ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ವಿ ಅನುಷ್ಠಾನ ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು  ₹ 1ಲಕ್ಷ ಬಹುಮಾನ ಮತ್ತು ಫಲಕವನ್ನು ಒಳಗೊಂಡಿದೆ.

ಜಿಲ್ಲೆಯಲ್ಲಿ ಜನವರಿ 26ರಿಂದ ಆರಂಭವಾದ ಜಾಥಾ ಫೆ.23ರವರೆಗೆ ಜಿಲ್ಲೆಯ ಎಲ್ಲಾ 194 ಗ್ರಾಮ ಪಂಚಾಯಿತಿಗಳ ಕೇಂದ್ರಸ್ಥಾನ, 7 ಸ್ಥಳೀಯ ಸಂಸ್ಥೆಗಳ ಕೇಂದ್ರಸ್ಥಾನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜಾಥಾ ಏರ್ಪಡಿಸುವ ಮೂಲಕ ಸಂವಿಧಾನ ನೀಡಿರುವ ಅವಕಾಶಗಳು, ವರ್ಗರಹಿತ ಸಮ ಸಮಾಜದ ನಿರ್ಮಾಣ, ಜಾತ್ಯಾತೀತ ನಿಲುವುಗಳು, ಸಮಾನತೆ, ಭ್ರಾತೃತ್ವ ಕುರಿತಂತೆ ಸಂವಿಧಾನದ ಪ್ರಸ್ತಾವನೆ ಪ್ರತಿಜ್ಞೆ ಕುರಿತು ಜಾಗೃತಿ ಮೂಡಿಸಲಾಯಿತು.

ADVERTISEMENT

ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಸ್ವ ಸಹಾಯ ಸಂಘಗಳ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರನ್ನು ಜಾಥಾ ಸಂದರ್ಭದಲ್ಲಿ ತೊಡಗಿಸಿಕೊಳ್ಳುವಂತೆ ಜನ ಜಾಗೃತಿ ಮೂಡಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.