ADVERTISEMENT

ಚನ್ನಗಿರಿ | ಲಾರಿಗಳ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 15:56 IST
Last Updated 19 ಫೆಬ್ರುವರಿ 2024, 15:56 IST

ಚನ್ನಗಿರಿ: ತಾಲ್ಲೂಕಿನ ಹೊನ್ನೇಬಾಗಿ ಗ್ರಾಮದ ಬಳಿಯ ಈದ್ಗಾ ಮೈದಾನದ ಎದುರು ಶನಿವಾರ ತಡರಾತ್ರಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. 

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ವಾಸಿ ತಳ್ಳಿನಿಂಗಪ್ಪ (24) ಮೃತಪಟ್ಟವರು. ಗೋವಿಂದ, ಮಂಜು ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT