ADVERTISEMENT

ದಾವಣಗೆರೆ | ಹೆಸರು, ಸೂರ್ಯಕಾಂತಿ ಖರೀದಿಗೆ ಡಿಸಿ ಪತ್ರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 16:26 IST
Last Updated 9 ಸೆಪ್ಟೆಂಬರ್ 2024, 16:26 IST
ಗಂಗಾಧರಸ್ವಾಮಿ ಜಿ.ಎಂ
ಗಂಗಾಧರಸ್ವಾಮಿ ಜಿ.ಎಂ   

ದಾವಣಗೆರೆ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಸೂರ್ಯಕಾಂತಿ ಹಾಗೂ ಹೆಸರುಕಾಳು ಖರೀದಿಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಜಿಲ್ಲೆಯಲ್ಲಿ ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಬೇಕು. ಇಲ್ಲವೇ ಪಕ್ಕದ ಹಾವೇರಿ ಅಥವಾ ಚಿತ್ರದುರ್ಗ ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ದಾವಣಗೆರೆ ರೈತರ ಬೆಳೆಗಳನ್ನು ಖರೀದಿಸಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿಕೊಂಡಿದ್ದಾರೆ.

‘ಹೆಸರು ಹಾಗೂ ಸೂರ್ಯಕಾಂತಿಯನ್ನು ಎಫ್‌ಎಕ್ಯೂ ಗುಣಮಟ್ಟದಲ್ಲಿ ಖರೀದಿಸಲು ಅನುಮತಿ ನೀಡಿದ ಪಟ್ಟಿಯಲ್ಲಿ ದಾವಣಗೆರೆ ಸೇರಿಲ್ಲ. ಜಿಲ್ಲೆಯಲ್ಲಿ ಸೂರ್ಯಕಾಂತಿ 910 ಹೆಕ್ಟೇರ್ ಬೆಳೆ ವಿಸ್ತೀರ್ಣ ಹೊಂದಿದ್ದು, 735 ಮೆಟ್ರಿಕ್‌ ಟನ್‌ ಉತ್ಪಾದನೆ ನಿರೀಕ್ಷೆ ಇದೆ. ಹೆಸರು ಬೆಳೆ 37 ಮೆಟ್ರಿಕ್‌ ಟನ್‌ ಉತ್ಪಾದನೆಯಾಗಲಿದೆ. ಸೂರ್ಯಕಾಂತಿ ಹಾಗೂ ಹೆಸರು ಬೆಳೆ ಆವಕ ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.