ADVERTISEMENT

ಎಫ್‌ಐಡಿ ನೋಂದಣಿ: ಕಂದಾಯ ಇಲಾಖೆಯಿಂದ ಮನೆ ಮನೆಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 16:01 IST
Last Updated 20 ಡಿಸೆಂಬರ್ 2023, 16:01 IST
ಹೊಳೆ ಸಿರಿಗೆರೆ ಗ್ರಾಮದಲ್ಲಿ ಉಪ ತಹಶೀಲ್ದಾರ್ ರವಿ ಅವರು ಎಫ್‌ಐಡಿ ನೋಂದಣಿ ಮಾಡಿಸುವಂತೆ ರೈತರ ಮನವೊಲಿಸಿದರು
ಹೊಳೆ ಸಿರಿಗೆರೆ ಗ್ರಾಮದಲ್ಲಿ ಉಪ ತಹಶೀಲ್ದಾರ್ ರವಿ ಅವರು ಎಫ್‌ಐಡಿ ನೋಂದಣಿ ಮಾಡಿಸುವಂತೆ ರೈತರ ಮನವೊಲಿಸಿದರು   

ಕಡರನಾಯ್ಕನಹಳ್ಳಿ: ಹೊಳೆ ಸಿರಿಗೆರೆ ಗ್ರಾಮದಲ್ಲಿ ರೈತರ ಮನೆ ಮನೆಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.

ಎಫ್‌ಐಡಿ ರೈತರ ಗುರುತಿನ ಸಂಖ್ಯೆಯಾಗಿದೆ. ರೈತರು ಎಫ್‌ಐಡಿ ನೋಂದಣಿ ಮಾಡಿಸುವುದು ಕಡ್ಡಾಯ. ಆದರೆ ಹಲವು ರೈತರು ಇದರ ಬಗ್ಗೆ ನಿರಾಸಕ್ತಿ ಹೊಂದಿದ್ದಾರೆ. ಆದ್ದರಿಂದ ಗ್ರಾಮಕ್ಕೆ ಭೇಟಿ ನೀಡಿ ರೈತರ ಮನವೊಲಿಸಲಾಗುತ್ತಿದೆ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. 

‘ಕೃಷಿ ಸಂಬಂಧಿತ ಸಬ್ಸಿಡಿಗಳನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ ₹6,000 ಸಂದಾಯ ಮಾಡಲಾಗುತ್ತಿದೆ. ಬೆಳೆ ಪರಿಹಾರ, ಬೆಳೆ ವಿಮೆ ಇವುಗಳ ಪರಿಹಾರಕ್ಕೆ ಎಫ್‌ಐಡಿ ನೋಂದಣಿ ಕಡ್ಡಾಯವಾಗಿದೆ. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ಕೊಡಿ. ಇಲಾಖೆಯಿಂದ ನೋಂದಣಿ ಮಾಡಿಸಲು ಕ್ರಮ ವಹಿಸುತ್ತೇವೆ’  ಎಂದು ಮಲೇಬೆನ್ನೂರು ಉಪ ತಹಶೀಲ್ದಾರ್ ರವಿ ಹೇಳಿದರು.

ADVERTISEMENT

ಹಲವು ರೈತರಿಂದ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ಪಡೆದುಕೊಂಡರು.

ಗ್ರಾಮ ಲೆಕ್ಕಾಧಿಕಾರಿ ನವೀನ್, ಗ್ರಾಮ ಸೇವಕಿ ಮಂಜಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.