ADVERTISEMENT

ದಾವಣಗೆರೆ | ಅತ್ಯಾಚಾರ: 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 16:53 IST
Last Updated 24 ಅಕ್ಟೋಬರ್ 2024, 16:53 IST
<div class="paragraphs"><p>ಬಂಧನ</p></div>

ಬಂಧನ

   

(ಸಾಂದರ್ಭಿಕ ಚಿತ್ರ)

ದಾವಣಗೆರೆ: ವಿವಾಹವಾಗುವುದಾಗಿ ನಂಬಿಸಿ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 10 ವರ್ಷ ಜೈಲು ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ADVERTISEMENT

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಇಮ್ರಾನ್ ಖಾನ್ ದೇವಡಿ ಶಿಕ್ಷೆಗೆ ಗುರಿಯಾದ ಅಪರಾಧಿ. ದಂಡದ ಮೊತ್ತವನ್ನು ಸಂತ್ರಸ್ತ ಯುವತಿಗೆ ನೀಡಲು ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಆದೇಶದಲ್ಲಿ ತಿಳಿಸಿದ್ದಾರೆ.

ವಿವಾಹವಾಗುವುದಾಗಿ ಸ್ನೇಹಿತೆಯನ್ನು ನಂಬಿಸಿದ್ದ ಅಪರಾಧಿ, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಮನೆಗೆ 2018ರ ಡಿ.2ರಂದು ಕರೆದೊಯ್ದಿದ್ದನು. ಅತ್ಯಾಚಾರ ಎಸಗಿದ ಅಪರಾಧಿ, ಈ ದೃಶ್ಯಗಳಿವೆ ಎಂಬುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನು. ಈ ವಿಚಾರವನ್ನು ಬೇರೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.

ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಇನ್‌ಸ್ಟೆಕ್ಟರ್‌ ಕೆ.ನಾಗಮ್ಮ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.