ADVERTISEMENT

ದಾವಣಗೆರೆ ಲೋಕಸಭಾ ಕ್ಷೇತ್ರ: ‘ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ಬಂಡಾಯ ಖಚಿತ‘

ಬೇರೆಯವರಿಗೆ ಟಿಕೆಟ್‌ ನೀಡಿ; ಎಂ.ಪಿ. ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 15:23 IST
Last Updated 21 ಮಾರ್ಚ್ 2024, 15:23 IST
<div class="paragraphs"><p>ದಾವಣಗೆರೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಜಿ.ಕರುಣಾಕರ ರೆಡ್ಡಿ,  ಎಂ.ಪಿ.ರೇಣುಕಾಚಾರ್ಯ, ಬಿ.ಜಿ.ಅಜಯ್‌ಕುಮಾರ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ, ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜನಾಯ್ಕ,  ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಇತರರು ಇದ್ದರು.</p></div>

ದಾವಣಗೆರೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಜಿ.ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಬಿ.ಜಿ.ಅಜಯ್‌ಕುಮಾರ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ, ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜನಾಯ್ಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಇತರರು ಇದ್ದರು.

   

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗಬೇಕು. ಬದಲಾಗದೇ ಇದ್ದರೆ ಕೊನೆಯ ಕ್ಷಣದಲ್ಲಿ ಬಂಡಾಯವಾಗಿ ‘ಅಚ್ಚರಿ ಅಭ್ಯರ್ಥಿ’ಯನ್ನು ಕಣಕ್ಕೆ ಇಳಿಸಲಾಗುವುದು ಎಂದು ಮಾಜಿ ಸಚಿವರಾದ ಎಸ್‌.ಎ. ರವೀಂದ್ರನಾಥ್ ಹಾಗೂ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

‘ಅಭ್ಯರ್ಥಿ ಬದಲಾಗಲಿದ್ದಾರೆ ಎಂಬ ವಿಶ್ವಾಸ ಇದೆ. ಬದಲಿಸಿದ ಹತ್ತಾರು ನಿದರ್ಶನಗಳು ನಮ್ಮೆದುರಿಗೆ ಇವೆ.‌ ನಾಮಪತ್ರ ಸಲ್ಲಿಕೆಯ ಕೊನೆ ಕ್ಷಣದವರೆಗೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಕೊನೆಯ ದಿನದವರೆಗೂ ಕಾಯುತ್ತೇವೆ. ಬದಲಿಸದಿದ್ದರೆ ಬಿಜೆಪಿಯಲ್ಲಿರುವ ಪ್ರಮುಖರೊಬ್ಬರನ್ನು ಕಣಕ್ಕಿಳಿಸಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಪ್ಪಿಸುತ್ತೇವೆ’ ಎಂದು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಮೋದಿ, ಜೆ.ಪಿ.ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಾವು ಹೇಳಿಕೆ ನೀಡಿಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಹೋಳಿ ಹಬ್ಬದ ನಂತರ ವಿವಿಧ ಮಠಾಧೀಶರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ’ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ, ಮಾಜಿ‌ ಶಾಸಕರಾದ ಎ.ಎಚ್. ಶಿವಯೋಗಿ ಸ್ವಾಮಿ, ಬಸವರಾಜ್ ನಾಯ್ಕ, ಮುಖಂಡರಾದ ಲೋಕಿಕೆರೆ ನಾಗರಾಜ್, ಬಿ.ಜಿ. ಅಜಯಕುಮಾರ, ಮಾಡಾಳ್ ಮಲ್ಲಿಕಾರ್ಜುನ್, ಡಾ.ಟಿ.ಜಿ. ರವಿಕುಮಾರ್ ಈ ಸಂದರ್ಭ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.