ADVERTISEMENT

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಇಬ್ಬರು ಕಾನ್‌ಸ್ಟೆಬಲ್‌ಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 0:09 IST
Last Updated 20 ಸೆಪ್ಟೆಂಬರ್ 2024, 0:09 IST
<div class="paragraphs"><p>ಕಲ್ಲು ತೂರಾಟ</p></div>

ಕಲ್ಲು ತೂರಾಟ

   

– ಸಾಂದರ್ಭಿಕ ಚಿತ್ರ

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಿರುವ ಘಟನೆ ಇಲ್ಲಿನ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳಿಗೆ ಗಾಯವಾಗಿದೆ.

ADVERTISEMENT

ಬೇತೂರು ರಸ್ತೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ರಾತ್ರಿ 7.30ರ ವೇಳೆಗೆ ವೆಂಕಟೇಶ್ವರ ದೇವಸ್ಥಾನದ ವೃತ್ತಕ್ಕೆ ಬಂದಾಗ ಕೆಲವರು ಘೋಷಣೆ ಕೂಗಿದ್ದರಿಂದ ಗಲಭೆ ಆರಂಭವಾಗಿದೆ. ಏಕಾಏಕಿ ಒಂದು ಗುಂಪಿನ ಮೇಲೆ ಕಲ್ಲು ತೂರಾಟ ನಡೆದಿದೆ.

ಬಂದೋಬಸ್ತ್‌ಗೆ ನಿಯುಕ್ತರಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಅನ್ನಪೂರ್ಣಾ, ರಘು ಅವರಿಗೆ ಕಲ್ಲು ಬಡಿದು ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಸಂದರ್ಭ ಪೊಲೀಸ್‌ ಸಿಬ್ಬಂದಿ ಲಾಠಿ ಪ್ರಹಾರ ನಡೆಸುವ ಮೂಲಕ ಗುಂಪನ್ನು ಚದುರಿಸಿದರು. ಸ್ಥಳದಲ್ಲಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಪರಿಸ್ಥಿತಿ ತಹಬದಿಗೆ ತರಲು ಅಗತ್ಯ ಕ್ರಮ ಕೈಗೊಂಡು, ಪೊಲಿಸ್‌ ತುಕಡಿ ನಿಯೋಜಿಸಿದರು.

ಗಲಭೆ ಆರಂಭವಾಗುತ್ತಿದ್ದಂತೆಯೇ ಅಂಗಡಿ– ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದರಿಂದ ಹೆಚ್ಚುವರಿಯಾಗಿ ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.