ಕಡರನಾಯ್ಕನಹಳ್ಳಿ: ಸಮೀಪದ ಯಲವಟ್ಟಿ ಗ್ರಾಮದಲ್ಲಿ ಸಾಲದ ಹೊರೆಯಿಂದ ರೈತರೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಪ್ರಕಾಶನಾಯ್ಕ (35) ಆತ್ಮಹತ್ಯೆ ಮಾಡಿಕೊಂಡವರು. ಬೇರೆಯವರ ಜಮೀನಿನನ್ನು ಗೇಣಿ ಪಡೆದು (ಲಾವಣಿ) ವ್ಯವಸಾಯ ಮಾಡುತ್ತಿದ್ದರು. ಬೆಳೆ ಬೆಳೆಯಲು ಹಲವು ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದರು. ಸಮರ್ಪಕ ಮಳೆ ಆಗದ ಕಾರಣ ಬೆಳೆ ಬಂದಿರಲಿಲ್ಲ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ದೂರು ನೀಡಿದ್ದಾರೆ.
ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.