ADVERTISEMENT

ಚನ್ನಗಿರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ರೈತ ಸಂಘ ಬೆಂಬಲ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 15:12 IST
Last Updated 15 ಡಿಸೆಂಬರ್ 2023, 15:12 IST
ಚನ್ನಗಿರಿಯ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಶುಕ್ರವಾರ ರೈತ ಸಂಘದ ಮುಖಂಡರು ಭಾಗವಹಿಸಿದ್ದರು
ಚನ್ನಗಿರಿಯ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಶುಕ್ರವಾರ ರೈತ ಸಂಘದ ಮುಖಂಡರು ಭಾಗವಹಿಸಿದ್ದರು   

ಚನ್ನಗಿರಿ: ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೆ ಒತ್ತಾಯಿಸಿ ಪಟ್ಟಣದ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ 23ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ರೈತ ಸಂಘದವರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

‘ನ. 23ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದ ಕಾಲೇಜುಗಳಲ್ಲಿ ತರಗತಿಗಳು ನಡೆಯದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೂ ಸರ್ಕಾರ ಈ ವಿಷಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡದೇ ಇರುವುದು ಅಚ್ಚರಿಯ ಸಂಗತಿ. ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ಚರ್ಚೆ ನಡೆಸಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು’ ಎಂದು ರೈತ ಸಂಘದ ಅಧ್ಯಕ್ಷ ನಾಗೇಂದ್ರಪ್ಪ ಒತ್ತಾಯಿಸಿದರು.

‘ಕನ್ನಡನಾಡು ಹಿತರಕ್ಷಣಾ ಸಮಿತಿ, ಸ್ವಾಭಿಮಾನಿ ನಾಯಕರ ಯುವ ವೇದಿಕೆ, ಮುಸ್ಲಿಂ ಸಮಾಜದ ಮುಖಂಡರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ’ ಎಂದು ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ್ ಯರಗಟ್ಟಿಹಳ್ಳಿ ತಿಳಿಸಿದರು.

ADVERTISEMENT

ರೈತ ಸಂಘದ ಮುಖಂಡರಾದ ಜಯಪ್ಪ, ಹನುಮಂತಪ್ಪ, ನವೀನ್, ಅಣ್ಣಪ್ಪ, ಅತಿಥಿ ಉಪನ್ಯಾಸಕರಾದ ಸಂತೋಷ್, ಹರೀಶ್, ಶಕೀಲ್, ಗಿರೀಶ್, ಮಹಾರುದ್ರಸ್ವಾಮಿ, ಶಿಲ್ಪಾ, ಶೀಲಾ, ವಿದ್ಯಾ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.