ADVERTISEMENT

ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 16:39 IST
Last Updated 17 ಅಕ್ಟೋಬರ್ 2024, 16:39 IST
<div class="paragraphs"><p>ಬಸನಗೌಡ ಪಾಟೀಲ ಯತ್ನಾಳ</p></div>

ಬಸನಗೌಡ ಪಾಟೀಲ ಯತ್ನಾಳ

   

ದಾವಣಗೆರೆ: ‘ರಾಜ್ಯ ಸರ್ಕಾರದ ಪತನಕ್ಕೆ ₹ 1,000 ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ’ ಎಂಬ ಆರೋಪ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಮನೋಹರ್‌ ಅವರು ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ನೀಡಿದ ದೂರು ಇಲ್ಲಿನ ಗಾಂಧಿನಗರ ಠಾಣೆಗೆ ವರ್ಗಾವಣೆಗೊಂಡಿದೆ.

ADVERTISEMENT

‘ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿ ಐದು ವರ್ಷ ಸುಭದ್ರ ಆಡಳಿತ ನಡೆಸಲು ಜನಾದೇಶ ಕೊಟ್ಟಿದ್ದಾರೆ. ಅಧಿಕಾರವಿಲ್ಲದೇ ಹತಾಶರಾಗಿರುವ ಬಿಜೆಪಿಯ ಕೆಲ ನಾಯಕರು ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿದ್ದು ಯತ್ನಾಳ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಹೇಳಿಕೆ ನೀಡಿದ ಯತ್ನಾಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮನೋಹರ್‌ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.