ADVERTISEMENT

ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ: ನಂದಿಸಲು ಹರಸಾಹಸ

​ಪ್ರಜಾವಾಣಿ ವಾರ್ತೆ
Published 3 ಮೇ 2024, 5:15 IST
Last Updated 3 ಮೇ 2024, 5:15 IST
ದಾವಣಗೆರೆ ಹೊರವಲಯದ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ ಬೆಂಕಿ ಬಿದ್ದಿರುವುದು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆ ಹೊರವಲಯದ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ ಬೆಂಕಿ ಬಿದ್ದಿರುವುದು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ನಗರದ ಹೊರವಲಯದ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಅಪಾರ ಕಸದ ರಾಶಿಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿದೆ.

ಅಪಾರ ಪ್ರಮಾಣದ ಕಸದ ರಾಶಿಗೆ ಬೆಂಕಿ ಬಿದ್ದಿರುವ ಕಾರಣ ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ವ್ಯಾಪಿಸಿತ್ತು. ಮುಗಿಲೆತ್ತರದವರೆಗೂ ದಟ್ಟ ಹೊಗೆ ಏಳುತ್ತಿತ್ತು. ಅಪಾರ ಪ್ರಮಾಣದ ಕಸದ ರಾಶಿಗೆ ಬೆಂಕಿ ಬಿದ್ದಿರುವ ಕಾರಣ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಳಗಿನ ಜಾವ ಬೆಂಕಿ ಬಿದ್ದಿದ್ದು, ರಾತ್ರಿಯವರೆಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸುವ ‍ಪ್ರಯತ್ನ ಮಾಡಿದರು. ಯಾವುದೇ ಹಾನಿಯಾಗಿಲ್ಲ.

‘ಬಿಸಿಲಿನ ಪ್ರಖರತೆಗೆ ಕಸದ ರಾಶಿಯಾದ ಕಾರಣ ಶಾಖದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಇಲ್ಲ ಆಕಸ್ಮಿಕವಾಗಿ ಬೆಂಕಿ ಬಿದ್ದಿರಲೂಬಹುದು. ಘಟಕ 16 ಎಕರೆ ಪ್ರದೇಶದಲ್ಲಿರುವ ಕಾರಣ ರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆವು. ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ. ಯಾವುದೇ ಹಾನಿಯಾಗಿಲ್ಲ’ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್‌ಕುಮಾರ್‌ ಬಿ.ಆರ್. ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT
ದಾವಣಗೆರೆ ಹೊರವಲಯದ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ ಬೆಂಕಿ ಬಿದ್ದು ದಟ್ಟ ಹೊಗೆ ಆವರಿಸಿರುವುದು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆ ಹೊರವಲಯದ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ ಬೆಂಕಿ ಬಿದ್ದಿರುವುದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು    –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.