ADVERTISEMENT

ಮಹಾತ್ಮರ ಜೀವನ ಎಲ್ಲರಿಗೂ ಮಾರ್ಗದರ್ಶನವಾಗಲಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2023, 16:10 IST
Last Updated 2 ಅಕ್ಟೋಬರ್ 2023, 16:10 IST
ಹೊಸದುರ್ಗದ ಸಾಣೇಹಳ್ಳಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು
ಹೊಸದುರ್ಗದ ಸಾಣೇಹಳ್ಳಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು   

ಹೊಸದುರ್ಗ: ‘ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳ ಜೀವನ, ತ್ಯಾಗ, ಪ್ರೀತಿ, ಮೌಲ್ಯ, ಸೇವಾ ಮನೋಭಾವ ಎಲ್ಲರಿಗೂ ಮಾರ್ಗದರ್ಶನವಾಗಲಿ. ಅವರ ದಾರಿಯಲ್ಲಿ ನಡೆಯಿರಿ’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಕ್ಕಳಿಗೆ ಕಿವಿಮಾತು ಹೇಳಿದರು.

ಗುರುಪಾದೇಶ್ವರ ಪ್ರೌಢಶಾಲೆ ಹಾಗೂ ಶಿವಕುಮಾರ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಯಿಂದ ಸೋಮವಾರ ಸಾಣೇಹಳ್ಳಿ ಮಠದ ಆವರಣದಲ್ಲಿ ಆಯೋಜಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಗಾಂಧಿ ಪ್ರತಿದಿನ ಬೆಳಿಗ್ಗೆ, ಸಂಜೆ ಪ್ರಾರ್ಥನೆ, ಧ್ಯಾನ ಮಾಡಿ ಅಂತರಂಗದ ಶುಚಿತ್ವ ಮಾಡಿಕೊಳ್ಳುತ್ತಿದ್ದರು. ಬಹಿರಂಗದ ಶುಚಿತ್ವಕ್ಕಾಗಿ ಕಸಗುಡಿಸುತ್ತಿದ್ದರು. ಬರೀ ನಾವೊಬ್ಬರೇ ಮಾಡಿದರೆ ಸಾಲದು ಸಾರ್ವಜನಿಕರಿಗೆ ಶುಚಿತ್ವದ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂದು ಕೆಲವು ಕೇರಿಗಳಿಗೆ ಹೋಗಿ ಬೀದಿಯ ಒಂದು ವಾರಗಳ ಕಾಲ ಕಸ ಗುಡಿಸಿ ಸ್ವಚ್ಛಗೊಳಿಸಿದರು’ ಎಂದು ಹೇಳಿದರು.

ADVERTISEMENT

ಗುರುಪಾದೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ.ಬಿ.ಚಳಗೇರಿ, ಶಿವಕುಮಾರ ಬಿ.ಎಸ್. ಸೇರಿದಂತೆ ಉಭಯ ಶಾಲೆಗಳ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.