ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಜನೆ ಇದೆ ಎಂದು ಸರ್ಕಾರ ವಿಧಾನಸಭೆಯಲ್ಲಿ ಹೇಳಿದೆ. ಇವುಗಳನ್ನು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಪ್ರಾರಂಭಿಸುವುದಾಗಿಯೂ ತಿಳಿಸಿದೆ. ಆದರೆ, ದಾವಣಗೆರೆಯಲ್ಲಿರುವ ಚಿಗಟೇರಿ ಸರ್ಕಾರಿ ಆಸ್ಪತ್ರೆಯನ್ನೂ ಖಾಸಗಿಯವರಿಗೆ ವಹಿಸಿದರೆ, ಬಡವರಿಗೆ ತೊಂದರೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಪ್ರತಿಭಟನೆ ಆರಂಭಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯೂ ಖಾಸಗಿಯವರ ಪಾಲಾದರೆ, ಬಡವರಿಗೆ ಆರೋಗ್ಯ ಸೇವೆಯೂ ದುಬಾರಿಯಾಗಲಿದೆ ಎಂಬ ಆತಂಕವೂ ಜನಸಾಮಾನ್ಯರನ್ನು ಕಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.